ಮಂಗಳವಾರ, ಏಪ್ರಿಲ್ 20, 2021
29 °C

ಟ್ರೋಫಿ ಗೆಲ್ಲಲು ಉತ್ತಮ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ (ಪಿಟಿಐ): ತವರು ನೆಲದಲ್ಲಿಯೇ ಕ್ವಾರ್ಟರ್‌ಫೈನಲ್ ಹಾಗೂ ಒಂದು ಸೆಮಿಫೈನಲ್ ಪಂದ್ಯ ನಡೆಯುವುದರಿಂದ ಈ ಸಲದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಟ್ರೋಫಿ  ಗೆಲ್ಲಲು ಉತ್ತಮ ಅವಕಾಶ ಎಂದು ಲಂಕಾ ತಂಡದ ಮಾಜಿ ನಾಯಕ ಅರ್ಜುನ ರಣತುಂಗಾ ಅಭಿಪ್ರಾಯಪಟ್ಟಿದ್ದಾರೆ.

‘ಕೊಲಂಬೊದಲ್ಲಿಯೇ ಕ್ವಾರ್ಟರ್‌ಫೈನಲ್ ಹಾಗೂ ಒಂದು ಸೆಮಿಫೈನಲ್ ಪಂದ್ಯ ನಡೆಯಲಿದೆ. ಇದು ಆತಿಥೇಯ ಆಟಗಾರರಿಗೆ ಅನುಕೂಲವಾಗಲಿದೆ. ಲಂಕಾ ತಂಡ ಈ ಅವಕಾಶವನ್ನು ಉಪಯೋಗ ಪಡಿಸಿಕೊಂಡರೆ 15 ವರ್ಷಗಳ ನಂತರ ಮತ್ತೆ ಟ್ರೋಫಿಯನ್ನು ಗೆಲ್ಲಬಹುದು’ ಎಂದು ಅವರು ಹೇಳಿದ್ದಾರೆ. ಶ್ರೀಲಂಕಾ ಈ ಮೊದಲು 1996ರ ವಿಶ್ವಕಪ್‌ನಲ್ಲಿ ಟ್ರೋಫಿ ಜಯಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.