ಗುರುವಾರ , ಮೇ 6, 2021
32 °C

ಟ್ರ್ಯಾಕ್ಟರ್ ಕೆರೆಗೆ ಉರುಳಿ 4 ಸಾವು: 18 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ತಾಲ್ಲೂಕಿನ ರಾಮಲಿಂಗಪುರ ಕೆರೆಗೆ 36 ಜನ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟು, 18 ಮಂದಿ ಗಾಯಗೊಂಡ ದುರ್ಘಟನೆ ಸೋಮವಾರ ನಡೆದಿದೆ.ಗಂಭೀರ ಗಾಯಗೊಂಡವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಗಾಯಾಳುಗಳಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಘಟನೆ: ಚಿಕ್ಕನಾಯಕನಹಳ್ಳಿ ತಾಲ್ಲೂಕು ಜಾಣೇಹಾರು ಗ್ರಾಮದ ವಾಲ್ಮೀಕಿ ಸಮಾಜದ ಮಹಿಳೆಯರು, ಮಕ್ಕಳು ಸೇರಿದಂತೆ 36 ಜನರು ಟ್ರ್ಯಾಕ್ಟರ್‌ನಲ್ಲಿ ಶಿರಾ ತಾಲ್ಲೂಕು ಯರಮಾರನಹಳ್ಳಿ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ್ದರು. ದೇವಸ್ಥಾನದಲ್ಲಿ ಪೂಜೆ ಮುಗಿಸಿ ರಾತ್ರಿ ಅಲ್ಲಿಯೇ ತಂಗಿದ್ದು, ಸೋಮವಾರ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ರಾಮಲಿಂಗಪುರ ಕೆರೆ ಏರಿ ಮೇಲೆ ಟ್ರ್ಯಾಕ್ಟ್‌ರ್ ಬರುತ್ತಿದ್ದ ಸಮಯದಲ್ಲಿ ಮುಂದಿನ ಟೈರ್ ಬರಸ್ಟ್ ಆಗಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮುಂದಿನ ಟೈರ್ ಬರಸ್ಟ್ ಆಗಿದ್ದನ್ನು ಅರಿಯದ ಟ್ರ್ಯಾಕ್ಟರ್ ಚಾಲಕ ಮಂಜುನಾಥ್ ಹಿಂದಿನ ಟೈರ್ ಬರಸ್ಟ್ ಆಯಿತು ಎಂದು ಹಿಂದೆ ತಿರುಗಿ ನೋಡಿದ್ದೇ ತಡ ಟ್ರ್ಯಾಕ್ಟರ್ ಕೆರೆ ಒಳಗೆ ಬಿತ್ತು ಎಂದು ಅಪಾಯದಿಂದ ಪಾರಾದ ಪ್ರತ್ಯಕ್ಷದರ್ಶಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು. ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಿಂದ ಶವಗಳ ಪತ್ತೆ ಕಾರ್ಯಕ್ಕೆ ಶ್ರಮಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.