ಶನಿವಾರ, ಮೇ 15, 2021
24 °C

ಟ್ರ್ಯಾಕ್ಟರ್ ಚಕ್ರಕ್ಕೆ ಸಿಕ್ಕಿ ಯೋಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂತೇಬೆನ್ನೂರು (ದಾವಣಗೆರೆ ಜಿಲ್ಲೆ): ಗಣೇಶನ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಆಂಜಿನಪ್ಪ (27) ಎಂಬ   ಯೋಧ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.7 ವರ್ಷಗಳಿಂದ ಜಮ್ಮು-ಕಾಶ್ಮೀರದಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತ್ದ್ದಿದ ಇವರು ಕೆಲವು ದಿನಗಳ ಹಿಂದೆಯಷ್ಟೆ ರಜೆಯ ಮೇಲೆ ಊರಿಗೆ ಬಂದಿದ್ದರು. ಇಲ್ಲಿನ ವಿನಾಯಕ ನಗರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ಮೂರ್ತಿಯನ್ನು ಭದ್ರಾ ನಾಲೆಯಲ್ಲಿ ವಿಸರ್ಜಿಸಲು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇವರು ಇದೇ ತಿಂಗಳ ಕೊನೆಯಲ್ಲಿ ಸೇವೆಗೆ ವಾಪಸ್ ಆಗಲಿದ್ದರು.ಸಂತೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.