ಬುಧವಾರ, ಜೂನ್ 23, 2021
21 °C

ಠಾಣೆಗಳಿಗೆ ಶಸ್ತ್ರಾಸ್ತ್ರ ಒಪ್ಪಿಸಲು ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೋಕಸಭಾ ಚುನಾ­ವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರ ಪರ­ವಾನಗಿ ಹೊಂದಿರುವವರು ಮಾ.19­ರೊಳಗೆ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಠಾಣೆಗಳ ವಶಕ್ಕೆ ಒಪ್ಪಿಸಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ರಾಘವೇಂದ್ರ ಔರಾದಕರ್‌ ಆದೇಶಿಸಿದ್ದಾರೆ.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ­ವಾಗಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಿಗೆ ಸೇರಿದ ಶಸ್ತ್ರಾಸ್ತ್ರಗಳು, ಸಾರ್ವಜನಿಕ ಹಾಗೂ ಖಾಸಗಿ ವಲಯದ ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳು, ಸೆಕ್ಯುರಿಟಿ ಏಜೆನ್ಸಿಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗೆಜೆಟೆಡ್‌ (ಪತ್ರಾಂಕಿತ) ಅಧಿಕಾರಿ­ಗ­ಳಿಗೆ ಈ ಆದೇಶ ಅನ್ವಯಿ­ಸು­ವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.ಭದ್ರತೆಯ ಕಾರಣಕ್ಕಾಗಿ ಆದೇಶ­ದಿಂದ ವಿನಾಯಿತಿ ಬಯಸುವ ವ್ಯಕ್ತಿ­ಗಳು ಸಂಬಂಧಪಟ್ಟ ವಿಭಾಗದ ಡಿಸಿಪಿ ಅವರಿಗೆ ಮನವಿ ಸಲ್ಲಿಸಿ, ಅನುಮತಿ ಪಡೆದುಕೊಳ್ಳಬೇಕು. ನಿಗದಿತ ಗಡುವಿ­ನೊಳಗೆ ಶಸ್ತ್ರಾಸ್ತ್ರಗಳನ್ನು ಠಾಣೆಯ ವಶಕ್ಕೆ ನೀಡದ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.