ಬುಧವಾರ, ನವೆಂಬರ್ 20, 2019
25 °C

ಠಾಣೆ ಮುಂದೆ ಮಧ್ಯರಾತ್ರಿ ಪ್ರತಿಭಟನೆ

Published:
Updated:

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕರ್‌ನ್ನು ಚುನಾವಣಾ ಅಧಿಕಾರಿಗಳು ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ.ಪಕ್ಷೇತರ ಅಭ್ಯರ್ಥಿ ಬಿ.ಮುನೇಗೌಡ ಈ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದರು ಎಂದು ಹೇಳಲಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಬಂದಿದೆ ಎಂಬ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಟ್ಯಾಂಕ್‌ನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅಧಿಕಾರಿಗಳ ಈ ಕ್ರಮವನ್ನು ಖಂಡಿಸಿ ಸುಮಾರು 100 ಜನಕ್ಕೂ ಹೆಚ್ಚು ಸೊಣ್ಣೇನಹಳ್ಳಿ ಗ್ರಾಮಸ್ಥರು ದೊಡ್ಡಬೆಳವಂಗಲ ಪೊಲೀಸ್ ಠಾಣೆ ಮುಂದೆ ಮಧ್ಯರಾತ್ರಿ ಸುಮಾರು 12.30ರ ಸುಮಾರಿನಲ್ಲಿ ಪ್ರತಿಭಟನೆ ನಡೆಸಿದರು. ಬಿ.ಮುನೇಗೌಡ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪ್ರತಿಕ್ರಿಯಿಸಿ (+)