ಭಾನುವಾರ, ಜೂನ್ 7, 2020
22 °C

ಡಾ.ರಾ.ಸತ್ಯನಾರಾಯಣಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಾ.ರಾ.ಸತ್ಯನಾರಾಯಣಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದ ಭವ್ಯ ವೇದಿಕೆಯಲ್ಲಿ ಸಂಗೀತ ವಿದ್ವಾನ್ ಡಾ.ರಾ.ಸತ್ಯನಾರಾಯಣ ಅವರಿಗೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಂಗಳವಾರ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಪ್ರಶಸ್ತಿ ಪ್ರದಾನ ಸಂಭ್ರಮದಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸದಾನಂದಗೌಡ, `ಸಾಹಿತಿ ಚಂದ್ರಶೇಖರ್ ಕಂಬಾರ ಅವರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿರುವುದು ಕನ್ನಡಕ್ಕೆ ಸಂದ ಗೌರವ. ಆದರೆ, ಅವರ ತವರು ಜಿಲ್ಲೆಯಲ್ಲೇ ಅವರನ್ನು ಸನ್ಮಾನಿಸುವ ಬಗ್ಗೆ ಅಪಸ್ವರ ಕೇಳಿ ಬಂದಿದೆ ಎಂದರಲ್ಲದೆ, ಸರ್ಕಾರ ಯಾವುದೇ ಕಾರಣಕ್ಕೂ ಭಾಷಾ ಪ್ರಹಾರವನ್ನು ಸಹಿಸುವುದಿಲ್ಲ~ ಎಂದು ಎಚ್ಚರಿಕೆ ನೀಡಿದರು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ರಾ.ಸತ್ಯನಾರಾಯಣ, `ಸರ್ಕಾರ ಆರಂಭಿಸಿರುವ ಸಂಗೀತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಸಂಬಂಧಿಸಿದಂತೆ ಉಚಿತವಾಗಿ  ಮಾರ್ಗದರ್ಶನ ನೀಡುತ್ತೇನೆ. ಅತ್ಯುನ್ನತ ಅಂಕ ಗಳಿಸುವ ವಿದ್ಯಾರ್ಥಿಗಳು ಹಾಗೂ ಸಂಶೋಧನಾರ್ಥಿಗಳಿಗೆ ಚಿನ್ನದ ಪದಕ ನೀಡಲು ಅನುದಾನ ನೀಡುತ್ತೇನೆ~ ಎಂದರು.`ಸಂಗೀತ/ನೃತ್ಯಕ್ಕೆ ಸಂಬಂಧಿಸಿದ ಪುಸ್ತಕ, ತಾಳೆಗರಿ, ಹಸ್ತಪ್ರತಿಗಳನ್ನು ವಿಶ್ವವಿದ್ಯಾನಿಲಯದ ಗ್ರಂಥಾಲಯಕ್ಕೆ ಉಚಿತವಾಗಿ ನೀಡಲು ತೀರ್ಮಾನಿಸಿದ್ದೇನೆ~ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.