ಡಾ. ಮತ್ತೂರು ಕೃಷ್ಣಮೂರ್ತಿ ನಿಧನ

7

ಡಾ. ಮತ್ತೂರು ಕೃಷ್ಣಮೂರ್ತಿ ನಿಧನ

Published:
Updated:

ಬೆಂಗಳೂರು: ಭಾರತೀಯ ವಿದ್ಯಾಭವನದ ನಿರ್ದೇಶಕ ಡಾ. ಮತ್ತೂರು ಕೃಷ್ಣಮೂರ್ತಿ(83) ಗುರುವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.ಡಾ. ಮತ್ತೂರು ಕೃಷ್ಣಮೂರ್ತಿ ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದವರು. ಮತ್ತೂರರಿಗೆ 2009ರಲ್ಲಿ  ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ ಪದ್ಮಶ್ರೀ ಪ್ರಶಸ್ತಿ ದೊರಕಿತ್ತು.ಇವರು ಭಾರತೀಯ ವಿದ್ಯಾಭವನಕ್ಕೆ ಅಪಾರವಾದ ಸೇವೆ ಸಲ್ಲಿಸಿದ್ದಾರೆ. ಭಾರತ ವಿದ್ಯಾಭವನದ ಅಡಿಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶಾಲೆಗಳನ್ನು ಆರಂಭಿಸುವ ಮೂಲಕ ಮಕ್ಕಳಿಗೆ ಸುಸಂಕೃತ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ ಎಂಬುದು ಅವರ ನಿಲುವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry