ಬುಧವಾರ, ಏಪ್ರಿಲ್ 14, 2021
24 °C

ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿಗೆ ವೈದ್ಯಶ್ರೀ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ನಗರದ ಡಾ. ಪಿ.ಎಸ್. ಶಂಕರ ವೈದ್ಯಶ್ರಿಪ್ರಶಸ್ತಿಗೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ. ಪಿ.ಎಸ್. ಶಂಕರ ಪ್ರತಿಷ್ಠಾನದ ಕಾರ್ಯದರ್ಶಿ ಎಸ್.ಎಸ್. ಹಿರೇಮಠ ತಿಳಿಸಿದ್ದಾರೆ.ಬೆಂಗಳೂರಿನ ಜಯದೇವ ಹೃದ್ರೋಗ ಚಿಕಿತ್ಸೆ ಹಾಗೂ ಸಂಶೋಧನಾ ಸಂಸ್ಥೆಯ ಮಕ್ಕಳ ಹೃದ್ರೋಗ ಚಿಕಿತ್ಸಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿರುವ ಡಾ. ಬಾಳೇಕುಂದ್ರಿ ಅವರ ಅನುಪಮ ಸೇವೆ, ಅಧ್ಯಯನ, ಅಧ್ಯಾಪನ ಹಾಗೂ ಸಂಶೋಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ, ಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆ.

2013ರ ಜನವರಿ ಒಂದರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.