ಮಂಗಳವಾರ, ಮೇ 24, 2022
30 °C

ಡಿಆರ್‌ಎಸ್: ಬಿಸಿಸಿಐಗೆ ಮಣಿದ ಐಸಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ವಾಲಾಲಂಪುರ (ಪಿಟಿಐ): ತೀರ್ಪು ಮರುಪರಿಶೀಲನೆ (ಡಿಆರ್‌ಎಸ್) ನಿಯಮವನ್ನು ಕಡ್ಡಾಯಗೊಳಿಸಲು ಮುಂದಾಗಿದ್ದ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ತನ್ನ ನಿರ್ಧಾರವನ್ನು ಬದಲಿಸಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒತ್ತಡಕ್ಕೆ ಮಣಿದು ಐಸಿಸಿ ಈ ಹೆಜ್ಜೆಯಿಟ್ಟಿರುವ ಸಾಧ್ಯತೆಯಿದೆ.ಡಿಆರ್‌ಎಸ್‌ನ್ನು ಎಲ್ಲ ಟೆಸ್ಟ್ ಮತ್ತು ಏಕದಿನ ಸರಣಿಗಳಲ್ಲಿ ಕಡ್ಡಾಯಗೊಳಿಸಬೇಕು ಎಂದು ಐಸಿಸಿ ಪ್ರಧಾನ ವ್ಯವಸ್ಥಾಪಕ ಸಮಿತಿ (ಸಿಇಸಿ) ಎರಡು ದಿನಗಳ ಹಿಂದೆ ಶಿಫಾರಸು ಮಾಡಿತ್ತು. ಆದರೆ ಬಿಸಿಸಿಐ ಇದಕ್ಕೆ ತನ್ನ ವಿರೋಧ ವ್ಯಕ್ತಪಡಿಸಿತ್ತು. ಈ ನಿಯಮವನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.