ಶುಕ್ರವಾರ, ಮೇ 14, 2021
29 °C

ಡಿಎಸ್ಪಿ ಹತ್ಯೆ : ರಾಜಾ ಭಯ್ಯಾ ಹೆಸರನ್ನು ಕೈಬಿಟ್ಟ ಸಿಬಿಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಉತ್ತರಪ್ರದೇಶದಲ್ಲಿ ಸಂಚಲನವನ್ನೇ ಸೃಷ್ಟಿಸಿದ್ದ ಡಿಎಸ್ಪಿ ಜಿಯಾ-ಉಲ್-ಹಕ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದೇ ಹೇಳಲಾದ ಮಾಜಿ ಸಚಿವ `ರಾಜಾ ಭಯ್ಯಾ' ಅವರ ಹೆಸರನ್ನು ಕೈಬಿಟ್ಟು ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.ಪ್ರಕರಣದಲ್ಲಿ ರಾಜಾ ಭಯ್ಯಾ ಅವರ ಪಾತ್ರದ ಕುರಿತು ಇನ್ನೂ ತನಿಖೆ ನಡೆಯುತ್ತಿದೆ. ಒಂದು ವೇಳೆ ಅವರು ಭಾಗಿಯಾಗಿರುವುದಕ್ಕೆ ಸಾಕ್ಷ್ಯಾಧಾರಗಳು ಲಭಿಸಿದ್ದಲ್ಲಿ ಮತ್ತೊಂದು ಆರೋಪ ಪಟ್ಟಿ ದಾಖಲಿಸಲಾಗುವುದು ಎಂದು ಸಿಬಿಐ ಮೂಲಗಳು ಖಚಿತಪಡಿಸಿವೆ.ಪ್ರತಾಪಗಡ ಜಿಲ್ಲೆಯಲ್ಲಿ ಏಪ್ರಿಲ್‌ನಲ್ಲಿ ಡಿಎಸ್ಪಿ ಜಿಯಾ-ಉಲ್-ಹಕ್ ಅವರನ್ನು ಹತ್ಯೆ ಮಾಡಲಾಗಿತ್ತು. ನಂತರ ಇದಕ್ಕೆ ಸಂಬಂಧಿಸಿದಂತೆ  ಪೊಲೀಸರು ದಾಖಲಿಸಿದ್ದ ಪ್ರಥಮ ಮಾಹಿತಿ ವರದಿಯಲ್ಲಿ ರಾಜಾ ಅವರ ಕೈವಾಡ ಇದೆ ಎಂದು ಆರೋಪಿಸಿಲಾಗಿತ್ತು. ನಂತರ ಸರ್ಕಾರ ರಾಜಾ ಭಯ್ಯ ಅವರನ್ನು ರಕ್ಷಿಸುತ್ತಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

ಹೀಗಾಗಿ ಉತ್ತರಪ್ರದೇಶದ ಅಖಿಲೇಶ್ ಯಾದವ್ ಅವರ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸೇವೆಗಳ ಸಚಿವರಾಗಿದ್ದ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ `ರಾಜಾ ಭಯ್ಯಾ' ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.