ಭಾನುವಾರ, ಜೂನ್ 13, 2021
24 °C

ಡಿಕೆಶಿ ವಿರುದ್ಧ ಕ್ರಮಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಬೆಂಬಲಿಗರು ವರದಿಗಾರರ ಮೇಲೆ ಹಲ್ಲೆ ನಡೆಸಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳ­ಬೇಕು ಎಂದು ಒತ್ತಾಯಿಸಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ನಗರದ ಶೇಷಾದ್ರಿ ರಸ್ತೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.



ಕುಟುಕು ಕಾರ್ಯಾಚರ­ಣೆ­ಗೆಂದು ಡಿಕೆಶಿ ಅವರ ಮನೆಗೆ ಹೋಗಿದ್ದ ವರದಿಗಾರರ ಮೇಲೆ ಸಚಿವರ ಬೆಂಬಲಿಗರು ಹಲ್ಲೆ ನಡೆಸಿ­ದ್ದಾರೆ. ಇದರಿಂದ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಮಧ್ಯಪ್ರವೇಶ ಮಾಡಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯ­ದಾದ್ಯಂತ ಹೋರಾಟವನ್ನು ತೀವ್ರ­ಗೊಳಿಸಲಾಗುವುದು’ ಎಂದು ಪ್ರತಿ­ಭಟನಾಕಾರರು ಎಚ್ಚರಿಕೆ ನೀಡಿದರು.



‘ಸಚಿವರು ವರದಿಗಾರರ ವಿರುದ್ಧ ಸುಳ್ಳು ಆರೋಪ ಮಾಡಿ­ದ್ದಾರೆ. ಪೊಲೀಸರು ಒತ್ತಡಕ್ಕೆ ಮಣಿದು ವರದಿಗಾರರನ್ನು ಬಂಧಿಸಿದ್ದಾರೆ. ಕೂಡಲೇ ಅವರ ಬಿಡುಗಡೆಯಾಗಬೇಕು’ ಎಂದು ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.