ಡಿಕ್ಕಿ: ಬೈಕ್ ಸವಾರ ಸಾವು

7

ಡಿಕ್ಕಿ: ಬೈಕ್ ಸವಾರ ಸಾವು

Published:
Updated:

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವ್ನಪ್ಪಿದ ಘಟನೆ ರಾಜಾಜಿನಗರ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದೆ.ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದವರಾದ ಸಂತೋಷ್ ಕುಮಾರ್(24) ಮೃತಪಟ್ಟವರು. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ 8.30ರ ಸುಮಾರಿಗೆ ಪ್ರಕಾಶ್‌ನಗರದ ಮಾರ್ಗವಾಗಿ ಬೈಕ್‌ನಲ್ಲಿ ಹೋಗುತ್ತಿದ್ದರು. ರಾಜ್‌ಕುಮಾರ್ ರಸ್ತೆ ಬಳಿ ತಿರುವು ಪಡೆಯುವಾಗ ತುಮಕೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆ ವಿಭಜಕದ ಮೇಲೆ ಬಿದ್ದ ಅವರ ತಲೆಗೆ ತೀವ್ರ ಪೆಟ್ಟಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅವರು ಸಾವನ್ನಪ್ಪಿದರು ಎಂದು ಪೊಲೀಸರು ಮಾಹಿತಿ ನೀಡಿದರು.ಅವರು ಹೆಲ್ಮೆಟ್ ಧರಿಸದಿರುವುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದರು. ಎಚ್‌ಎಸ್‌ಆರ್ ಲೇಔಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry