ಬೆಂಗಳೂರು: ಸರ್ಕಾರದ ಒಪ್ಪಿಗೆ ಪಡೆಯದೇ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ಆರೋಪದ ಮೇಲೆ ಸಿಐಡಿ ಡಿಜಿಪಿ ರೂಪಕ್ಕುಮಾರ್ ದತ್ತ ವಿರುದ್ಧ ಮಲ್ಲೇಶ್ ಎಂಬುವರು ಸಲ್ಲಿಸಿರುವ ಖಾಸಗಿ ದೂರಿನ ಅಂಗೀಕಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಇದೇ 23ಕ್ಕೆ ಮುಂದೂಡಿದೆ. ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಬುಧವಾರ ಪ್ರಕರಣದ ವಿಚಾರಣೆ ನಡೆಸಿದರು. `ದತ್ತ ಅವರ ವ್ಯಾಸಂಗದಿಂದ ಸರ್ಕಾರ ಅಥವಾ ಸಾರ್ವಜನಿಕರಿಗೆ ಏನು ನಷ್ಟ ಆಗಿದೆ~ ಎಂಬ ಪ್ರಶ್ನೆಯನ್ನು ದೂರುದಾರರ ಮುಂದಿಟ್ಟರು. ಆದರೆ, ತಕ್ಷಣವೇ ಈ ಪ್ರಶ್ನೆಗೆ ಉತ್ತರ ನೀಡಲು ಮಲ್ಲೇಶ್ಗೆ ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಏ.23ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಧೀಶರು, ಆ ದಿನ ಸಮರ್ಪಕ ಉತ್ತರ ಒದಗಿಸುವಂತೆ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.