ಡಿ.ದೇವರಾಜು ಅರಸು ಪ್ರಶಸ್ತಿಗೆ ಅರ್ಜಿ

ಗುರುವಾರ , ಜೂಲೈ 18, 2019
22 °C

ಡಿ.ದೇವರಾಜು ಅರಸು ಪ್ರಶಸ್ತಿಗೆ ಅರ್ಜಿ

Published:
Updated:

ಬೆಂಗಳೂರು:  ಪ್ರಸಕ್ತ ಸಾಲಿನ ಡಿ.ದೇವರಾಜು ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯಮಟ್ಟದ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಮತ್ತು ವಿಭಾಗ ಮಟ್ಟದ ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.



ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು, ಹಿಂದುಳಿದ ವರ್ಗಗಗಳನ್ನು ಸಂಘಟಿಸಿ, ಅವರ ಶ್ರೇಯೋಭಿವೃದ್ಧಿಗೆ ದುಡಿಯುತ್ತಿರುವ ಹಾಗೂ ಮೀಸಲಾತಿ, ಶಿಕ್ಷಣ, ಸಾಮಾಜಿಕ ಪರಿವರ್ತನೆಗಾಗಿ ಶ್ರಮಿಸಿರುವವರು, ಹಿಂದುಳಿದ ವರ್ಗಗಳ ಶಿಕ್ಷಣ, ಆರ್ಥಿಕಾಭಿವೃದ್ಧಿ, ಔದ್ಯೋಗಿಕ ಕ್ಷೇತ್ರಗಳಲ್ಲಿ ಕಾರ್ಯ ನಿರತರಾಗಿರುವವರು ಅಲ್ಲದೇ,  ಅವರ ಕೊಡುಗೆಯನ್ನು ವಿಭಾಗ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿರಬೇಕು ಅಂತಹವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



ಅರ್ಜಿಯನ್ನು ದ್ವಿಪ್ರತಿಯಲ್ಲಿ ಜುಲೈ 12 ರೊಳಗೆ ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, 3 ನೇ ಮಹಡಿ, ದೇವರಾಜ ಅರಸು ಭವನ, ಮಿಲ್ಲರ್ಸ್‌ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ ಇಲ್ಲಿಗೆ ಸಲ್ಲಿಸಬೇಕು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry