ಶನಿವಾರ, ಜೂನ್ 19, 2021
29 °C

ಡಿನೋಟಿಫಿಕೇಷನ್ ಆದೇಶ ಹಿಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿನೋಟಿಫಿಕೇಷನ್ ವಿವಾದವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ, ಡಿನೋಟಿಫಿಕೇಷನ್ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ.ಯಶವಂತಪುರ ಹೋಬಳಿಯ ಜಾರಕಬಂಡೆ ಕಾವಲ್ ಬಳಿಯ ಒಂದು ಎಕರೆ ಜಮೀನನ್ನು `ನಂದಿನಿ ಲೇಔಟ್‌ನ ಮುಂದುವರಿದ ಬಡಾವಣೆ~ಗಾಗಿ ಸ್ವಾಧೀನಪಡಿಸಿಕೊಂಡು 25 ವರ್ಷಗಳ ನಂತರ ಅದನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ (ಡಿನೋಟಿಫೈ) ವಿವಾದ ಇದಾಗಿದೆ.ಇವರ ವಿರುದ್ಧ ಶಾಸಕ ನೆ.ಲ.ನರೇಂದ್ರಬಾಬು ಅವರು  ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. `ಈ ಜಮೀನನ್ನು ಸ್ವಾಧೀನಪಡಿಸಿಕೊಂಡ ನಂತರ ಅದರ ಮಾಲೀಕರಿಗೆ ಪರಿಹಾರ ನೀಡಲಾಗಿದೆ. ಅದು ಈಗ ಬಿಡಿಎ ಸ್ವಾಧೀನದಲ್ಲಿ ಇದೆ. ನಿಯಮದ ಪ್ರಕಾರ, ಒಮ್ಮೆ ಪರಿಹಾರ ನೀಡಿದ ಮೇಲೆ ಅದನ್ನು ಡಿನೋಟಿಫೈ ಮಾಡುವುದು ಕಾನೂನುಬಾಹಿರ.ಈ ಭಾಗದಲ್ಲಿ ಶಾಲೆ ನಡೆಯುತ್ತಿರುವ ಕಾರಣ, ಮಕ್ಕಳ ಭವಿಷ್ಯಕ್ಕಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಲಾಗಿದೆ. ಆದರೆ ಬಿಡಿಎ ಸ್ವಾಧೀನದಲ್ಲಿದ್ದ ಶಾಲೆಯನ್ನು 1985ರಲ್ಲಿ ಜಮೀನು ಸ್ವಾಧೀನಪಡಿಸಿಕೊಂಡಾಗಲೇ ತೆರವು ಮಾಡಲಾಗಿದೆ. ಆದರೆ ಶಾಲೆಯ ನೆಪವೊಡ್ಡಿ ತಮಗೆ ಬೇಕಾದವರಿಗೆ ಅನುಕೂಲ ಮಾಡಿಕೊಡುವ ಕಾರಣದಿಂದ ಡಿನೋಟಿಫೈ ಮಾಡಲಾಗಿದೆ~ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಫಲವಾಗಿದ್ದ ಯಡಿಯೂರಪ್ಪನವರನ್ನು ಕಳೆದ ಬಾರಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿತು.ಆದರೆ ಈಗ ಡಿನೋಟಿಫಿಕೇಷನ್ ಆದೇಶವನ್ನೇ ಹಿಂದಕ್ಕೆ ಪಡೆಯಲಾಗಿದೆ ಎಂದು ಸರ್ಕಾರದ ಪರ ವಕೀಲರು ಕೋರ್ಟ್‌ಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಪೀಠ ವಜಾಗೊಳಿಸಿತು. ಈ ವಿವಾದಕ್ಕೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳು ಎದುರಾದರೆ ಪುನಃ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಪೀಠ ಅನುಮತಿ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.