ಬೆಂಗಳೂರು: ಬೆನ್ನಿಗಾನಹಳ್ಳಿಯಲ್ಲಿನ 4.20 ಎಕರೆ ಜಮೀನನ್ನು ಕಾನೂನು ಬಾಹಿರವಾಗಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪ ಹೊತ್ತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದಾಖಲಾಗಿರುವ ದೂರಿನ ಅನ್ವಯ ನಡೆಯುತ್ತಿರುವ ತನಿಖೆಗೆ ತಡೆ ನೀಡಿ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರಿಗೂ ನಿರೀಕ್ಷಣಾ ಜಾಮೀನು ದೊರಕಿದ್ದು, ಈಗ ತನಿಖೆಗೆ ನಾಲ್ಕು ವಾರಗಳ ತಡೆ ನೀಡಿ ನ್ಯಾಯಮೂರ್ತಿ ವಿ.ಜಗನ್ನಾಥನ್ ಆದೇಶಿಸಿದ್ದಾರೆ.

ಸಾರ್ವಜನಿಕ ಉದ್ದೇಶಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿದ್ದ ಈ ಜಮೀನನ್ನು ಸಚಿವ ಸ್ಥಾನದ ದುರ್ಬಳಕೆ ಮಾಡಿಕೊಂಡು ಕಾನೂನುಬಾಹಿರವಾಗಿ ಖರೀದಿಸಿ, ಅಕ್ರಮವಾಗಿ ಅಭಿವೃದ್ಧಿಪಡಿಸಿ ಲಾಭ ಪಡೆದ ಆರೋಪ ಶಿವಕುಮಾರ್ ಅವರ ಮೇಲಿತ್ತು. ಇವರೂ ಸೇರಿದಂತೆ ಇನ್ನೂ ಹಲವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಕೋರ್ಟ್ ನೀಡಿದ್ದ ಆದೇಶದ ನಂತರ ತನಿಖೆ ಕೈಗೊಂಡಿದ್ದ ಲೋಕಾಯುಕ್ತ ಪೊಲೀಸರು ಎಲ್ಲ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಅಕ್ರಮದಲ್ಲಿ ಯಡಿಯೂರಪ್ಪನವರ ಕೈವಾಡವೂ ಇದೆ ಎಂದು ಅಭಿಪ್ರಾಯ ಪಟ್ಟಿದ್ದ ನ್ಯಾಯಾಧೀಶ ಎನ್.ಕೆ.ಸುಧೀಂದ್ರರಾವ್ ಅವರು, ಸ್ವಯಂ ಪ್ರೇರಿತವಾಗಿ ಯಡಿಯೂರಪ್ಪನವರ ಹೆಸರನ್ನು ಅದರಲ್ಲಿ ದಾಖಲು ಮಾಡಿದ್ದರು. ಇದನ್ನು ಇಬ್ಬರೂ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ವಿಚಾರಣೆ ಮುಂದೂಡಲಾಗಿದೆ.

ರಾಜಕಾಲುವೆ: ನಿರ್ಮಾಣ ಸಲ್ಲ
ರಾಜಕಾಲುವೆಯ ಮೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ಬುಧವಾರ ಬಿಬಿಎಂಪಿಗೆ ಆದೇಶಿಸಿದೆ.

ಜೆ.ಪಿ.ನಗರ 4ನೇ ಹಂತದಲ್ಲಿರುವ ಬೃಹತ್ ರಾಜಕಾಲುವೆ ಸಮೀಪ ಕಟ್ಟಡ ನಿರ್ಮಾಣಕ್ಕೆ ಪಾಲಿಕೆ ಅನುಮತಿ ನೀಡಿದ್ದು, ಇದರಿಂದ ಸ್ಥಳೀಯರಿಗೆ ತೊಂದರೆ ಆಗಿದೆ ಎಂದು ದೂರಿ ಅಲ್ಲಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಡೆಸುತ್ತಿದೆ.

`ಮಹಾದೇವ ಎಂಟರಪ್ರೈಸಸ್~ ಕಂಪೆನಿಗೆ ರಾಜಕಾಲುವೆ ಮೇಲೆ ರಸ್ತೆ ನಿರ್ಮಾಣಕ್ಕೆ ಗುತ್ತಿಗೆಗೆ ನೀಡಲಾಗಿದೆ. `ವೈಷ್ಣವಿ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್~ ಸಂಸ್ಥೆಗೆ ಕಾಲುವೆ ಪಕ್ಕದಲ್ಲಿ ಕಟ್ಟಡ ನಿರ್ಮಾಣಕ್ಕೂ ಪಾಲಿಕೆ ಅನುಮತಿ ನೀಡಿದೆ. ಇದು ಕಾನೂನುಬಾಹಿರ. ರಾಜಕಾಲುವೆ ಈಗಾಗಲೇ ಭಾಗಶಃ ಮುಚ್ಚಿದೆ. ಮಳೆಗಾಲದಲ್ಲಿ ಮಳೆಯ ನೀರು ರಸ್ತೆ ತುಂಬೆಲ್ಲ ಹರಿಯುವ ಕಾರಣ, ಇಲ್ಲಿ ಈಗಲೇ ಪ್ರವಾಹ ಉಕ್ಕಿ ಹರಿಯುತ್ತಿದೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಟ್ಟಡ ನಿರ್ಮಾಣವಾದರೆ ಜನ ಜೀವನ ದುಸ್ತರವಾಗುತ್ತದೆ ಎನ್ನುವುದು ಅವರ ವಾದ. ವಿಚಾರಣೆ ಮುಂದೂಡಲಾಗಿದೆ.

ಹುದ್ದೆ ಪ್ರಶ್ನಿಸಿ ಅರ್ಜಿ
ಜವಳಿ ಮತ್ತು ಕೈಮಗ್ಗ ನಿಗಮದ ಉಪ ನಿರ್ದೇಶಕರನ್ನಾಗಿ ಜೆ.ಟಿ.ಕುಮಾರ್ ಅವರನ್ನು ನೇಮಕ ಮಾಡಿರುವ ಆದೇಶದ ರದ್ದತಿಗೆ ಕೋರಿ ಹೈಕೋರ್ಟ್ಗೆ ಲಕ್ಷ್ಮಿನರಸಿಂಹಯ್ಯ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಇವರು ಉಪ ನಿರ್ದೇಶಕ ಸ್ಥಾನಕ್ಕೆ ಅರ್ಹ ವ್ಯಕ್ತಿ ಅಲ್ಲ ಎನ್ನುವುದು ಆರೋಪ.

`ಕುಮಾರ್ ಅವರು ನಿಮಗದ ಸಹಾಯಕ ನಿರ್ದೇಶಕರಾಗಿದ್ದ ವೇಳೆ `ಸರ್ವೋದಯ ನೇಕಾರರ ಸಿದ್ಧ ಉಡುಪು ತಯಾರಿಕೆ ಮತ್ತು ಮಾರಾಟ ಸಹಕಾರ ಸಂಘ~ದ ನೋಂದಣಿಗೆ ಕೋರಿ ನಾನು ಅರ್ಜಿ ಸಲ್ಲಿಸಿದ್ದೆ. ಆದರೆ ಅವರು ಕರ್ತವ್ಯ ಲೋಪ ಎಸಗಿದ್ದ ಕಾರಣದಿಂದ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದೆ. ದೂರು ದಾಖಲಾದ ಕಾರಣದಿಂದ ಆತ್ಮಹತ್ಯೆ ಪತ್ರ ಬರೆದಿಟ್ಟು, ಕುಮಾರ್ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

ಇದಾದ ನಂತರ ಅವರಿಗೆ ಉಪ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿರುವವರು ಉಪ ನಿರ್ದೇಶಕ ಸ್ಥಾನಕ್ಕೆ ಅರ್ಹರಾಗಲು ಸಾಧ್ಯವೇ ಇಲ್ಲ~ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿದೆ.

ಘನತ್ಯಾಜ್ಯ ನಿರ್ವಹಣೆ
ಬಿಬಿಎಂಪಿ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ವಸ್ತುಗಳನ್ನು ಸರಿಯಾಗಿ ನಿರ್ವಹಿಸುವಂತೆ ಆದೇಶಿಸಲು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಕವಿತಾ ಶಂಕರ್ ಅವರು ಸಲ್ಲಿಸಿರುವ ಈ ಅರ್ಜಿಗೆ ಸಂಬಂಧಿಸಿದಂತೆ ಬಿಬಿಎಂಪಿ, ಬಿಡಿಎ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.

ಕಚೇರಿ, ಮನೆ ಸೇರಿದಂತೆ ಹಲವು ಪ್ರದೇಶಗಳಿಂದ ಬಿಬಿಎಂಪಿ ದಿನನಿತ್ಯ ಸುಮಾರು 4 ಸಾವಿರ ಮೆಟ್ರಿಕ್ ಟನ್ ಘನತ್ಯಾಜ್ಯ ಸಂಗ್ರಹ ಮಾಡುತ್ತದೆ. ಅದನ್ನು ಬೇರ್ಪಡಿಸುವ ವೈಜ್ಞಾನಿಕ ಮಾದರಿಯನ್ನು ಪಾಲಿಕೆ ಅಳವಡಿಸಿಲ್ಲ. 2011ರ ಏಪ್ರಿಲ್ನಿಂದ ಸೆಸ್ ಕೂಡ ಪಾಲಿಕೆ ಸಂಗ್ರಹಿಸುತ್ತಿದೆ. ಇದರ ಹೊರತಾಗಿಯೂ ತ್ಯಾಜ್ಯಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎನ್ನುವುದು ಅರ್ಜಿದಾರರ ದೂರು.

ಆಯಾ ಪ್ರದೇಶಗಳಲ್ಲಿನ ನಿವೃತ್ತ ಅಧಿಕಾರಿಗಳ ನೇತೃತ್ವದಲ್ಲಿ ಇವುಗಳ ನಿರ್ವಹಣೆಗೆ ಸಮಿತಿ ರಚನೆ ಮಾಡುವಂತೆ ಅವರು ಕೋರ್ಟನ್ನು ಕೋರಿದ್ದಾರೆ. ವಿಚಾರಣೆ ಮುಂದೂಡಲಾಗಿದೆ.

ಲೈಂಗಿಕ ಕಿರುಕುಳ ವಿಚಾರಣಾ ಸಮಿತಿ ಪುನರುಜ್ಜೀವನ
ಲೈಂಗಿಕ ಕಿರುಕುಳ ವಿಚಾರಣಾ ಸಮಿತಿಯನ್ನು ಹೈಕೋರ್ಟ್ನಲ್ಲಿ ಪುನರುಜ್ಜೀವಗೊಳಿಸುವ ಅಗತ್ಯ ಇದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಮಾರ್ಚ್ 2ರಂದು ಸಿವಿಲ್ ಕೋರ್ಟ್ ಆವರಣದಲ್ಲಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಹಾಗೂ ವಕೀಲರ ನಡುವೆ ನಡೆದ ಜಟಾಪಟಿ ವೇಳೆ, ಪೊಲೀಸರು ವಕೀಲೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಕೀಲೆ ಸುಮನಾ ಬಾಳಿಗ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

`ಹೈಕೋರ್ಟ್ನಲ್ಲಿ ಮಾತ್ರ ಈ ಸಮಿತಿ ಇದೆ. ಆದರೆ, ಅದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆದುದರಿಂದ ಸೂಕ್ತ ನಿಯಮಗಳನ್ನು ರೂಪಿಸಬೇಕಿದೆ. ಜಿಲ್ಲಾ ಕೋರ್ಟ್ಗಳಲ್ಲಿ ಇದುವರೆಗೆ ಸಮಿತಿ ರಚನೆಗೊಂಡಿಲ್ಲ~ ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಹೇಳಿತು.

`ಸಿವಿಲ್ ಕೋರ್ಟ್ನಲ್ಲಿ ಘಟನೆಯಿಂದ ಮಹಿಳಾ ವಕೀಲರು ಗಾಬರಿಯಾಗಿದ್ದಾರೆ. ಅವರಿಗೆ ರಕ್ಷಣೆ ಇಲ್ಲವಾಗಿದೆ. ಅವರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ದೂರಲು ಲೈಂಗಿಕ ಕಿರುಕುಳ ವಿಚಾರಣಾ ಸಮಿತಿ ಇಲ್ಲ~ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕೈದಿಗಳಿಗೆ ಕನಿಷ್ಠ ವೇತನ: ಮೌಖಿಕ ಅಭಿಪ್ರಾಯ
`ಕಠಿಣ ಸಜೆ ಅನುಭವಿಸುತ್ತಿರುವ ಕೈದಿಗಳು ಜೈಲಿನಲ್ಲಿ ವಿವಿಧ ರೀತಿಯ ಕೆಲಸಗಳಲ್ಲಿ ತೊಡಗುವ ಕಾರಣ, ಅವರಿಗೆ ಕನಿಷ್ಠ ವೇತನ ಕಾಯ್ದೆ ಅಡಿ ನಿಗದಿಯಾಗಿರುವ ವೇತನವನ್ನು ನೀಡುವುದು ಸರ್ಕಾರದ ಕರ್ತವ್ಯ~ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೆಂಗಳೂರಿನ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದಲ್ಲಿನ ಬಹುತೇಕ ಜೈಲುಗಳಲ್ಲಿ ಕೈದಿಗಳಿಗೆ ಈ ಕಾಯ್ದೆ ಅಡಿ ಸಮಾನವಾಗಿ ಕೂಲಿ ನೀಡುತ್ತಿಲ್ಲ ಎಂದು ದೂರಿ ಎಸ್.ರಾಜಾರಾಮ್ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಇತರ ಪ್ರತಿವಾದಿಗಳಿಗೆ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.

`ಕೈದಿಗಳಿಗೆ ದಿನನಿತ್ಯ 30 ರೂಪಾಯಿ ನೀಡಲಾಗುತ್ತಿದೆ. ಜೈಲುಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ. 18 ವರ್ಷ ವಯಸ್ಸಿಗಿಂತ ಚಿಕ್ಕವರನ್ನೂ ಕೆಲವು ಜೈಲುಗಳಲ್ಲಿ ಇಡಲಾಗಿದೆ. ಇದು ಕಾನೂನುಬಾಹಿರ~ ಎನ್ನುವುದು ಅರ್ಜಿದಾರರ ದೂರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.