ಬೆಂಗಳೂರು: ಡಿನೋಟಿಫೈ ಪ್ರಕರಣದಲ್ಲಿ ಮೊದಲ ಬಾರಿಗೆ ಗೃಹ ಸಚಿವ ಆರ್. ಅಶೋಕ ಅವರ ವಿರುದ್ಧ ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಾಗಿದೆ.

ವಿಜಯನಗರದ ನಿವಾಸಿ ಎಂ.ಮಂಜುನಾಥ ಎನ್ನುವವರು ಬುಧವಾರ ದೂರು ದಾಖಲಿಸಿದ್ದು, ಇದರ ವಿಚಾರಣೆಯನ್ನು ಕೋರ್ಟ್ ಗುರುವಾರ ಕೈಗೆತ್ತಿಕೊಳ್ಳಲಿದೆ.

ದೂರು ಏನು?: ನಗರದ ಆರ್ಎಂವಿ ಬಡಾವಣೆಯ ಡಿನೋಟಿಫಿಕೇಷನ್ ವಿವಾದ ಇದು. ಇಲ್ಲಿಯ 23 ಗುಂಟೆ ಜಾಗವನ್ನು 1978 ಬಿಡಿಎ ಸ್ವಾಧೀನ ಪಡಿಸಿಕೊಂಡಿತ್ತು. ಆದರೆ ಈ ಜಾಗದ ಪೈಕಿ 14 ಗುಂಟೆಯನ್ನು 2003ರಲ್ಲಿ ಹಾಗೂ ಉಳಿದ 9 ಗುಂಟೆ ಜಾಗವನ್ನು 2007ರಲ್ಲಿ ಅಶೋಕ ಹಾಗೂ ಇತರ 12 ಮಂದಿ ಮೂಲ ಮಾಲೀಕರಿಂದ ಪಡೆದುಕೊಂಡಿದ್ದಾರೆ. ಒಮ್ಮೆ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನನ್ನು ಪುನಃ ಖರೀದಿ ಮಾಡುವ ಮೂಲಕ ಇವರು ಎಲ್ಲ ಕಾಯ್ದೆ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇಷ್ಟೇ ಅಲ್ಲದೇ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಮೇಲೆ 2009ರಲ್ಲಿ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಈ ಜಮೀನಿನ ಮೂಲ ಮಾಲೀಕರಿಂದ ಅರ್ಜಿ ಕೊಡಿಸಿ ಸಂಪೂರ್ಣ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಿಸಿಕೊಳ್ಳುವಲ್ಲಿ (ಡಿನೋಟಿಫೈ) ಯಶಸ್ವಿಯಾಗಿದ್ದಾರೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ 420 (ವಂಚನೆ), 406 ನಂಬಿಕೆ ದ್ರೋಹ ಸೇರಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಕಲಮುಗಳ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.

ಇನ್ನೊಂದು ಪ್ರಕರಣದಲ್ಲಿ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ವಿರುದ್ಧವೂ ಖಾಸಗಿ ದೂರು ಬುಧವಾರ ದಾಖಲಾಗಿದೆ. ಇವರು ಭೂಕಬಳಿಕೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದರ ವಿಚಾರಣೆಯನ್ನು ಕೋರ್ಟ್ ಇದೇ 14ರಂದು ನಡೆಸಲಿದೆ.

ಹೇಳಿಕೆ ದಾಖಲು: ಈ ಮಧ್ಯೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕುಟುಂಬದ ಸದಸ್ಯರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿರುವ ವಿನೋದ್ ಕುಮಾರ್ ಅವರ ಸಾಕ್ಷ್ಯವನ್ನು ಬುಧವಾರ ನ್ಯಾಯಾಲಯ ದಾಖಲು ಮಾಡಿಕೊಂಡಿದೆ.

‘ಕುಮಾರಸ್ವಾಮಿ ಅವರು, ಸ್ವ ಹಿತಾಸಕ್ತಿಗೆ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ನ ತೀರ್ಪುಗಳನ್ನು ಉಲ್ಲಂಘಿಸಿ ಸುಮಾರು 300 ಕೋಟಿ ರೂಪಾಯಿ ಬೆಲೆ ಬಾಳುವ ಗುಂಪು ನಿವೇಶನ ಮಂಜೂರು ಮಾಡಿದ್ದಾರೆ’ ಎಂದು ವಿನೋದ್ ತಿಳಿಸಿದರು. ಇದರ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.