ಮಂಗಳವಾರ, ಜನವರಿ 21, 2020
29 °C

ಡಿ.ಬಿ.ರಾಮಸ್ವಾಮಿ- ನಿಧನ ವಾರ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಿ.ಬಿ.ರಾಮಸ್ವಾಮಿ

ಚಿಕ್ಕಮಗಳೂರು:
ಸಂಸದ ಡಿ.ಬಿ.ಚಂದ್ರೇಗೌಡ ಅವರ ಅಣ್ಣ ದಾರದಹಳ್ಳಿಯ ಡಿ.ಬಿ.ರಾಮಸ್ವಾಮಿ (73) ಭಾನುವಾರ ರಾತ್ರಿ ನಿಧನರಾದರು.ದಾರದಹಳ್ಳಿಯಲ್ಲಿ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಸಕಲೇಶಪುರ ಜೇನು ಸಹಕಾರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.  ಇವರು, ದಾರದಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ಅಧ್ಯಕ್ಷ ಹಾಗೂ ಮೂಡಿಗೆರೆ ಹೌಸಿಂಗ್ ಸೊಸೈಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಗ್ರಾಮದ ದೇವಾಲಯಗಳ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಕೇಂದ್ರದ ಮಾಜಿ ಸಚಿವೆ ತಾರಾದೇವಿ ಸಿದ್ಧಾರ್ಥ, ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಂ.ಪುಟ್ಟೇಗೌಡ, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಸಿ.ಟಿ.ರವಿ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)