ಡಿಸಿ ಕಚೇರಿಗೆ ಮುತ್ತಿಗೆ ನಾಳೆ
ಗೋಕಾಕ: ಬರಗಾಲಕ್ಕೆ ಜನತೆ ತತ್ತರಿಸುತ್ತಿರುವ ಸಂದರ್ಭದಲ್ಲಿ ರಾಜಕೀಯ ಮುಖಂಡರು ತಮ್ಮ ಕುರ್ಚಿ ಉಳಿಸಿಕೊಳ್ಳುವುದರಲ್ಲಿಯೇ ತೊಡಗಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜುಲೈ 2 ರಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ನಿರ್ಧರಿಸಿದ್ದಾರೆ.
ವಿದ್ಯುತ್ ಇಲಾಖೆಯಿಂದ ಪೂರೈಕೆಯಲ್ಲಿ ಶಹರ ಮತ್ತು ಗ್ರಾಮಾಂತರ ಪ್ರದೇಶ ಎಂಬ ತಾರತಮ್ಯ ನೀತಿ, ಬೆಳೆ ನಷ್ಟ ಪರಿಹಾರ ನೀಡದಿದ್ದರೂ ವಿಮಾ ಹಣದ ಕಂತಿನ ಪ್ರಚಾರ ಮಾಡುತ್ತಿರುವ ಕೃಷಿ ಇಲಾಖೆಯ ನಿರ್ಲಕ್ಷ್ಯ ಧೋರಣೆ ಮೊದಲಾದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಕಾರ್ಯಕ್ರಮ ಹಾಕಲಾಗುವುದು ರೈತ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಬಿ.ಎಂ.ಮಳಲಿ ಪ್ರಕಟಣೆ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.