ಭಾನುವಾರ, ಜುಲೈ 25, 2021
22 °C

ಡಿಸ್ಕೊಥೆಕ್: ವಾರದಲ್ಲಿ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿರುವ ಡಿಸ್ಕೊಥೆಕ್ ಮತ್ತು ಮಹಿಳೆಯರು ಪರಿಚಾರಕರಾಗಿರುವ ಬಾರ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ಸ್ಪಷ್ಟ ಮಾರ್ಗಸೂಚಿಯನ್ನು ವಾರದಲ್ಲಿ ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ಈಚೆಗೆ ನಡೆದ ಕಾರ್ಯಾಗಾರದಲ್ಲಿ ಸೂಚನೆಗಳನ್ನು ಪಡೆಯಲಾಗಿದೆ. ಅವುಗಳನ್ನು ಆಧಾರವಾಗಿಟ್ಟುಕೊಂಡು ಗೃಹ ಇಲಾಖೆ ಕಾರ್ಯದರ್ಶಿಗಳು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಮಂಗಳವಾರ ತಿಳಿಸಿದರು.ಬಾರ್‌ಗಳಲ್ಲಿ ಪರಿಚಾರಕ ಮಹಿಳೆಯರು ಡಾನ್ಸ್ ಮಾಡುವಂತಿಲ್ಲ. ಈ ಸಂಬಂಧ ಕಾನೂನು ಇದೆ. ಅದರ ಅನುಷ್ಠಾನಕ್ಕೆ ನಿಯಮಾವಳಿ ರೂಪಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ರೂಪ ನೀಡಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.