ಕಾರವಾರ: ಜಿಲ್ಲೆಯ ಪ್ರಮುಖ ಬೆಳೆ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಎಂಟು ಕೇಂದ್ರಗಳನ್ನು ಸ್ಥಾಪಿಸಲು ಶುಕ್ರವಾರ ಜಿಲ್ಲಾಧಿಕಾರಿ ಇಂಕೋಂಗ್ಲಾ ಜಮೀರ್ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಳೆದ ವರ್ಷ ಜಿಲ್ಲೆಯ ಐದು ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿತ್ತು. ಈ ವರ್ಷ ಹೆಚ್ಚಿನ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಒಟ್ಟು ಎಂಟು ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು.

ಮುಂಡಗೋಡ, ಹಳಿಯಾಳ, ಕುಮಟಾ, ಅಂಕೋಲ, ಶಿರಸಿ, ಜಗಲ್ಬೇಟ (ಜೋಯಿಡಾ), ಸಿದ್ದಾಪುರ ಮತ್ತು ಹೊನ್ನಾವರದಲ್ಲಿ ಭತ್ತ ಖರೀದಿ ಕೇಂದ್ರವನ್ನು ಡಿ. 15ರೊಳಗಾಗಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭತ್ತ (ಸಾಮಾನ್ಯ) ಪ್ರತಿ ಕ್ವಿಂಟಲ್ಗೆ ರೂ. 1250 ಮತ್ತು ಭತ್ತ (ಎ-ಶ್ರೇಣಿ) ರೂ. 1280 ಬೆಂಬಲ ಬೆಲೆಯನ್ನು ಸರ್ಕಾರ ಘೋಷಣೆ ಮಾಡಿದೆ. ಇದೇ ದರದಲ್ಲಿ ಭತ್ತವನ್ನು ಖರೀದಿಸಲಾಗುವುದು ಎಂದು ಅವರು ಹೇಳಿದರು.

ಕಳೆದ ವರ್ಷ ಶಿರಸಿ, ಹಳಿಯಾಳ, ಮುಂಡಗೋಡು, ಕುಮಟಾ ಮತ್ತು ಕಾರವಾರದಲ್ಲಿ ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲಾಗಿತ್ತು. ಈ ಬಾರಿಯೂ ಖರೀದಿ ಕೇಂದ್ರವನ್ನು ಆರಂಭಿಸಿ ಪ್ರತಿ ಕ್ವಿಂಟಲ್ಗೆ ರೂ 1175 ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಮಾಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಖರೀದಿ ಕೇಂದ್ರಗಳಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಬಾರದು. ರೈತರಿಗೆ ಅನಗತ್ಯ ತೊಂದರೆ, ಹಣ ಪಾವತಿಯಲ್ಲಿ ವಿಳಂಬ ಮಾಡಬಾರದು. ಭತ್ತದ ತೇವಾಂಶ ಪರಿಶೀಲನೆಗೆ ತೇವಾಂಶ ಯಂತ್ರ ಎಲ್ಲಾ ಕಡೆ ಇರುವಂತೆ ಮತ್ತು ಅದು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಖರೀದಿ ಕೆಂದ್ರಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಮಾಡಿಕೊಡಬಾರದು. ರೈತರಿಂದ ಖರೀದಿಸುವ ಭತ್ತವನ್ನು ಸೂಕ್ತವಾಗಿ ದಾಸ್ತಾನು ಮಾಡಲು ವ್ಯವಸ್ಥೆ ಮಾಡಬೇಕು. ಭತ್ತವನ್ನು ಒಣಗಿಸಲು ಪ್ರತಿ ಖರೀದಿ ಕೇಂದ್ರದ ಹೊರಗಡೆ ಸೌಲಭ್ಯ ಕಲ್ಪಿಸಬೇಕು. ಕಳೆದ ವರ್ಷ ಉಂಟಾದ ಗೊಂದಲ ಈ ಬಾರಿ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಮೀರ್ ತಾಕೀತು ಮಾಡಿದರು.

ಖರೀದಿ ಕೇಂದ್ರಗಳಲ್ಲಿ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಕೃಷಿ ಸಹಾಯಕರಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಬೇಕು. ಖರೀದಿಸುವ ದಿನಾಂಕವನ್ನು ಆಯಾ ರೈತರಿಗೆ ಮುಂಚಿತವಾಗಿ ತಿಳಿಸಬೇಕು. ಖರೀದಿ ಕೇಂದ್ರಗಳ ಪ್ರತಿನಿತ್ಯದ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಎಪಿಎಂಸಿಯಲ್ಲಿ ಅವಕಾಶ ಇದ್ದರೆ ಪ್ರತಿ ಖರೀದಿ ಕೇಂದ್ರಕ್ಕೆ ತೇವಾಂಶ ಪರೀಕ್ಷಿಸುವ ಯಂತ್ರವನ್ನು ಖರೀದಿ ಮಾಡಬಹುದಾಗಿದೆ ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಪಿ.ಹೆಗಡೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.