ಡಿ.10ರಿಂದ ಮತದಾರರ ಪಟ್ಟಿ ಪರಿಷ್ಕರಣೆ

7

ಡಿ.10ರಿಂದ ಮತದಾರರ ಪಟ್ಟಿ ಪರಿಷ್ಕರಣೆ

Published:
Updated:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳೂ ಸೇರಿದಂತೆ, ರಾಜ್ಯದ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಒಟ್ಟು 46 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಳ್ಳಲಿದೆ. ಇದೇ 10ರಿಂದ ಈ ಕಾರ್ಯ ಆರಂಭವಾಗಲಿದೆ.ಈ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಇದೇ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ನಡೆದಿತ್ತು. `ಈಗಾಗಲೇ ಪ್ರಕಟಿಸಲಾದ ಮತದಾರರ ಕರಡು ಪಟ್ಟಿಯಲ್ಲಿ ಕೆಲವು ದೋಷಗಳಿರುವುದು ಕಂಡು ಬಂದಿದ್ದರಿಂದ ಆಯೋಗವು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.ಹೀಗಾಗಿ ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಕರಡು ಪಟ್ಟಿಹಿಂಪಡೆದಿದ್ದಾರೆ. ಆಯೋಗ 2013ರ ಜನವರಿ 1ರಿಂದ ಅನ್ವಯ ಆಗುವಂತೆ ಮತದಾರರ ಪಟ್ಟಿಯನ್ನು ಮತ್ತೆ ಪರಿಷ್ಕರಿಸಲಿದೆ.ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಳ್ಳಾರಿ, ಬಳ್ಳಾರಿ ನಗರ, ಗುಲ್ಬರ್ಗ ದಕ್ಷಿಣ, ಗುಲ್ಬರ್ಗ ಉತ್ತರ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಧಾರವಾಡ, ಹುಬ್ಬಳ್ಳಿ-ಧಾರವಾಡ ಪೂರ್ವ, ಹುಬ್ಬಳ್ಳಿ - ಧಾರವಾಡ ಕೇಂದ್ರ ಮತ್ತು ಹುಬ್ಬಳ್ಳಿ - ಧಾರವಾಡ ವಿಧಾನಸಭಾ ಕ್ಷೇತ್ರಗಳು, ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಒಳಪಡಲಿದೆ.ವರ್ಗಾವಣೆ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತಗಟ್ಟೆಗಳ ಗಡಿಗಳನ್ನು ಗುರುತಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಹಾಲಿ ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ ಅವರ ಕಾರ್ಯವೈಖರಿ ಬಗ್ಗೆ ಕೇಂದ್ರ ಚುನಾವಣಾ ಆಯೋಗ ತೀವ್ರ ಅತೃಪ್ತಿ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಗೊತ್ತಾಗಿದೆ.ಇದೇ ಕಾರಣಕ್ಕಾಗಿ ಸುರಂಜನ ಅವರನ್ನು ಬದಲಾಯಿಸಿ, ಆ ಸ್ಥಾನಕ್ಕೆ ಅನಿಲ್‌ಕುಮಾರ್ ಝಾ ಅವರನ್ನು ನೇಮಕ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry