ಬುಧವಾರ, ಜನವರಿ 29, 2020
23 °C

ಡಿ.28ಕ್ಕೆ ಕೆಪಿಸಿಸಿ ಕಾರ್ಯಕಾರಿಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೋಕಸಭಾ ಚುನಾವಣೆ ತಯಾರಿ ಕುರಿತು ಚರ್ಚಿಸಲು ಇದೇ 28ರಂದು ಕೆಪಿಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆ ಕುರಿತು ಪ್ರಮುಖ ಮುಖಂಡರ ಜೊತೆ ಸಮಾಲೋಚನೆ ನಡೆಸಲು ಕೆಪಿಸಿಸಿ ನಿರ್ಧ­ರಿಸಿದೆ. ಇದೇ 29 ಮತ್ತು 30ರಂದು ಕೆಪಿಸಿಸಿ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಲಿದೆ.

ಪ್ರತಿಕ್ರಿಯಿಸಿ (+)