ಡೀಮ್ಡ್ ಅರಣ್ಯ: ಕ್ರಮಕ್ಕೆ ವಿಧಾನಸಭಾಧ್ಯಕ್ಷರ ಆದೇಶ
ಬೆಂಗಳೂರು: ಮಲೆನಾಡು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನೂ ಅರಣ್ಯ ಇಲಾಖೆ ದಿಢೀರ್ ‘ಡೀಮ್ಡ್ ಅರಣ್ಯ’ ಎಂದು ಘೋಷಣೆ ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಸರ್ಕಾರಕ್ಕೆ ಆದೇಶ ನೀಡಿದರು.
ಶೂನ್ಯ ವೇಳೆಯಲ್ಲಿ ಬಿಜೆಪಿಯ ಎಂ.ಪಿ.ಕುಮಾರಸ್ವಾಮಿ ವಿಷಯ ಪ್ರಸ್ತಾಪಿಸಿ ‘ಡೀಮ್ಡ್ ಅರಣ್ಯವೆಂದು ಘೋಷಣೆ ಮಾಡಿರುವುದರಿಂದ ನಮ್ಮ ಭಾಗದಲ್ಲಿ ಸಾಕಷ್ಟು ತೊಂದರೆಯಾಗಿದೆ. ಹಿಂದಿನಿಂದಲೂ ಕೃಷಿ ಮಾಡಿಕೊಂಡು ಬಂದ ಜಮೀನುಗಳನ್ನೂ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಿದರೆ ಹೇಗೆ? ಇದರಿಂದ ಆಶ್ರಯ ಮನೆಗಳ ನಿರ್ಮಾಣಕ್ಕೂ ಜಾಗ ಸಿಗುತ್ತಿಲ್ಲ’ ಎಂದು ಹೇಳಿದರು.
ಕಂದಾಯ ಸಚಿವರು ಸದನದಲ್ಲಿ ಇಲ್ಲದ ಕಾರಣ ಅವರ ಗಮನಕ್ಕೆ ವಿಷಯ ತಂದು ಸೂಕ್ತ ಪರಿಹಾರ ಕಲ್ಪಿಸುವುದಾಗಿ ಕಾನೂನು ಸಚಿವ ಸುರೇಶ್ಕುಮಾರ್ ಸದನಕ್ಕೆ ತಿಳಿಸಿದರು.ನಂತರ ಸ್ವತಃ ಸಭಾಧ್ಯಕ್ಷರೇ ಮಧ್ಯಪ್ರವೇಶ ಮಾಡಿ, ‘ಈ ಸಮಸ್ಯೆ ನಮ್ಮ ಕಡೆಯೂ ಹೆಚ್ಚಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂಬುದಾಗಿ ಆದೇಶಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.