ಶುಕ್ರವಾರ, ಜೂನ್ 18, 2021
28 °C

ಡೀಸೆಲ್ ಹೊಗೆಯಿಂದ ಶ್ವಾಸಕೋಶದ ಕ್ಯಾನ್ಸರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಐಎಎನ್‌ಎಸ್): ಡೀಸೆಲ್‌ನಿಂದ ಉಂಟಾಗುವ ಅನಿಲವನ್ನು ಹೆಚ್ಚಾಗಿ ಸೇವಿಸುವವರು ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿ ಸಾವನ್ನಪ್ಪುತ್ತಾರೆ ಎಂದು ಅಧ್ಯಯನ ತಿಳಿಸಿದೆ.1980ರಲ್ಲಿ ಈ ಕುರಿತು ಅಧ್ಯಯನ ಆರಂಭಿಸಿರುವ ಕ್ಯಾನ್ಸರ್ ಮತ್ತು ಶ್ವಾಸಕೋಶದ ಕ್ಯಾನ್ಸರ್‌ನ ಅಂತರ ರಾಷ್ಟ್ರೀಯ ಸಂಶೋಧನಾ ಸಂಸ್ಥೆ (ಐಎಆರ್‌ಸಿ), ಡೀಸೆಲ್‌ನಿಂದ ಹೊರಹೊಮ್ಮುವ ಹೊಗೆಯಿಂದ ಶ್ವಾಸಕೋಶದ ಕ್ಯಾನ್ಸರ್ ಉಂಟಾಗುವುದಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿದೆ.ಇದಕ್ಕಾಗಿ ಗಣಿಯಲ್ಲಿ ಕೆಲಸ ಮಾಡುತ್ತಿರುವ 12,315 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಡೀಸೆಲ್‌ನಿಂದ ಉತ್ಪತ್ತಿಯಾಗುವ ಹೊಗೆಯಿಂದ ಶ್ವಾಸಕೋಶದಲ್ಲಿ ಕಾರ್ಬನ್ ಕಣಗಳು ಸೇರಿಕೊಳ್ಳುತ್ತವೆ. ಈ ಕಣಗಳ ಸಂಖ್ಯೆ ಹೆಚ್ಚಾಗಿ ಅದು ಕ್ಯಾನ್ಸರ್‌ಗೆ ದಾರಿ ಮಾಡಿಕೊಡುತ್ತದೆ ಎಂದು ಸಮೀಕ್ಷೆ ಗುರುತಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.