ಮಂಗಳವಾರ, ಏಪ್ರಿಲ್ 13, 2021
25 °C

ಡೆಂಗೆ: ಆತಂಕದಲ್ಲಿ ತಿಮ್ಮನಾಯಕನಹಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಳಬಾಗಲು:  ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ಅನೇಕರು ಡೆಂಗೆ ಜ್ವರ ಬಾಧಿತರಾಗಿದ್ದಾರೆ. ಕೆಲವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗ್ರಾಮದ ಸಂಧ್ಯಾ (7) ಕಳೆದ ಹತ್ತು ದಿನಗಳಿಂದ ಜ್ವರ ಪೀಡಿತರಾಗಿದ್ದಾರೆ. ಮುಳಬಾಗಲು ಹಾಗೂ ಕೋಲಾರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿಲ್ಲ. ಇದೀಗ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಗ್ರಾಮದ ರಕ್ಷಿತಾ (3) ಸಹ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗ್ರಾಮದ ಚರಂಡಿಗಳು ಹೂಳಿನಿಂದ ಕಟ್ಟಿಕೊಂಡಿರುವುದು ಹಾಗೂ ಕುಡಿಯುವ ನೀರಿನ ಪೈಪ್‌ಗಳು ಒಡೆದು ಹೋಗಿರುವುದು ಸಾಂಕ್ರಾಮಿಕ ರೋಗಕ್ಕೆಮುಖ್ಯ ಕಾರಣ. ಎರಡು ತಿಂಗಳ ಹಿಂದೆ ವೈದ್ಯಾಧಿಕಾರಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಚರಂಡಿ ದುರಸ್ತಿಗೆ ಹಾಗೂ ನೀರಿನ ಪೈಪ್ ಬದಲಾವಣೆಗೆ ಸೂಚಿಸಿದ್ದರು. ಆದರೆ ಗ್ರಾಮ ಪಂಚಾಯತಿ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ನಾರಾಯಣ್ ದೂರಿದ್ದಾರೆ.ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಡೆಂಗೆ ಜ್ವರದ ಕುರಿತು ಜಾಗೃತಿ ಮೂಡಿಸಲು ಗ್ರಾಮ ಪಂಚಾಯತಿ ಮತ್ತು ಆರೋಗ್ಯ ಇಲಾಖೆ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.ಪ್ರಥಮ ಪದವಿ ಪ್ರವೇಶ: ಅರ್ಜಿ ಆಹ್ವಾನ

ಕೋಲಾರ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ನಗರದ ಬಾಲಕರ ಸರ್ಕಾರಿ ಕಾಲೇಜಿನಲ್ಲಿ 2012-13ನೇ ಸಾಲಿಗೆ ಪ್ರಥಮ ಬಿ.ಎ/ಬಿ.ಎಸ್ಸಿ/ಬಿ.ಕಾಂ/ಬಿ.ಬಿ.ಎಂ. ಕೋರ್ಸಿಗೆ ಪ್ರವೇಶ ನೀಡಲಾಗುವುದು. ಅರ್ಜಿಯನ್ನು ಆಗಸ್ಟ್ 6ರಿಂದ ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕ ರೂ 21 ಪಾವತಿಸಿ ಅರ್ಜಿ ಪಡೆಯಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.