ಡೆಂಗೆ ಜ್ವರಕ್ಕೆ ಬಾಲಕ ಬಲಿ

7

ಡೆಂಗೆ ಜ್ವರಕ್ಕೆ ಬಾಲಕ ಬಲಿ

Published:
Updated:

ಸಿರವಾರ: ಡೆಂಗೆ ಜ್ವರದಿಂದ ಬಳಲುತ್ತಿದ್ದ ಜಿಲ್ಲೆಯ ಬಾಲಕನೊಬ್ಬ ಹೈದರಾಬಾದ್‌ನಲ್ಲಿ ಸಾವನ್ನಪ್ಪಿದ ಘಟನೆ ನಡೆಸಿದೆ. ಡೆಂಗೆ ಜ್ವರಕ್ಕೆ ಬಲಿಯಾದ ಬಾಲಕ ಮಾನ್ವಿ ತಾಲ್ಲೂಕಿನ ಸಿರವಾರ ಗ್ರಾಮದ ಮಂಜುನಾಥ ಎಂಬುವವನಾಗಿದ್ದಾನೆ.ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ ಕೆಲ ದಿನದಿಂದ ಜ್ವರದಿಂದ ಬಳಲುತ್ತಿದ್ದ. ಚಿಕಿತ್ಸೆ ಸಂದರ್ಭದಲ್ಲಿ ಈತ ಡೆಂಗೆ ಜ್ವರದಿಂದ ಬಳಲುತ್ತಿರುವುದು ಪತ್ತೆಯಾಗಿತ್ತು. ಹೆಚ್ಚಿನ ಚಿಕಿತ್ಸೆಗೆ  ಐದು ದಿನಗಳ ಹಿಂದೆ ಹೈದರಾಬಾದ್‌ಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry