ಬೆಂಗಳೂರು: ಡೆಂಗೆ ಜ್ವರದಿಂದ ರಾಜ್ಯದ ವಿವಿಧೆಡೆ ಮೃತಪಟ್ಟಿರುವ ಎಲ್ಲರ ಕುಟುಂಬಗಳಿಗೂ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸುವಂತೆ ಒತ್ತಾಯಿಸಿ ಬಿಜೆಪಿ ಸದಸ್ಯರು ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಕೆಲಕಾಲ ಧರಣಿ ನಡೆಸಿದರು. ನಂತರ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದರಾದರೂ ಮುಖ್ಯಮಂತ್ರಿಯವರಿಂದಲೇ ಹೇಳಿಕೆಗೆ ಪಟ್ಟು ಹಿಡಿದಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗೆ ಜ್ವರದಿಂದ ನೂರಾರು ಮಂದಿ ಬಳಲುತ್ತಿರುವ ಕುರಿತು ನಿಯಮ 68ರ ಅಡಿಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಡಿ.ವಿ.ಸದಾನಂದ ಗೌಡ, ಬಿಜೆಪಿಯ ಡಾ.ಎ.ಎಚ್.ಶಿವಯೋಗಿ ಸ್ವಾಮಿ, ಅಶ್ವತ್ಥನಾರಾಯಣ, ಬಿ.ಜೆ.ಪುಟ್ಟಸ್ವಾಮಿ ಮತ್ತು ಸೋಮಣ್ಣ ಬೇವಿನಮರದ ಅವರು, ಸಮಸ್ಯೆ ಉಲ್ಬಣವಾಗುವುದನ್ನು ತಡೆಯಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

`ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿದ ತಕ್ಷಣವೇ ತಮ್ಮ ಕ್ಷೇತ್ರದ ಡಿ.ಸಾಲುಂಡಿ ಗ್ರಾಮಕ್ಕೆ ತೆರಳಿ ಡೆಂಗೆ ಜ್ವರದ ಕುರಿತು ಪರಿಶೀಲನೆ ನಡೆಸಿದ್ದರು. ಅಲ್ಲಿ ಜ್ವರದಿಂದ ಸಾವಿಗೀಡಾಗಿದ್ದ ನಾಲ್ವರು ಮಕ್ಕಳ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನೂ ಪ್ರಕಟಿಸಿದ್ದರು. ರಾಜ್ಯದ ಇತರೆ ಕಡೆಗಳಲ್ಲಿ ಡೆಂಗೆ ಜ್ವರ ವ್ಯಾಪಕವಾಗಿ ಹಬ್ಬುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬೇರೆಡೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡದೇ ತಾರತಮ್ಯ ಮಾಡಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

ಉತ್ತರ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಪ್ರಸಕ್ತ ವರ್ಷದ ಜನವರಿ 1ರಿಂದ ಜೂನ್ 5ರವರೆಗೆ 4,106 ಶಂಕಿತ ಡೆಂಗೆ ಪ್ರಕರಣಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅವುಗಳಲ್ಲಿ 985 ಪ್ರಕರಣಗಳಲ್ಲಿ ಡೆಂಗೆ ಜ್ವರ ಖಚಿತಪಟ್ಟಿದೆ. ಎಲ್ಲ ಬಗೆಯ ಜ್ವರವನ್ನೂ ಡೆಂಗೆ ಜ್ವರ ಎಂದು ಬಿಂಬಿಸಲಾಗುತ್ತಿದೆ ಎಂದರು.

ಡೆಂಗೆ ಜ್ವರ ಹಬ್ಬದಂತೆ ತಡೆಯುವುದು ಹಾಗೂ ಜ್ವರ ಪತ್ತೆಯಾಗಿರುವವರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ಕೆಲಸ ಭರದಿಂದ ನಡೆಯುತ್ತಿದೆ. ಈ ಸಂಬಂಧ ಎಲ್ಲ ಜಿಲ್ಲೆಗಳ ಆರೋಗ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವಂತೆ ಕಿರಿಯ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರಿಗೆ ಆದೇಶಿಸಲಾಗಿದೆ. ರೋಗ ಪರೀಕ್ಷೆ ಮತ್ತು ಚಿಕಿತ್ಸೆಗೂ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಆದರೆ, ಆರೋಗ್ಯ ಸಚಿವರ ಉತ್ತರದಿಂದ ತೃಪ್ತರಾಗದ ಬಿಜೆಪಿ ಸದಸ್ಯರು, ಸಾಲುಂಡಿ ಗ್ರಾಮದಲ್ಲಿ ನೀಡಿದಂತೆ ಎಲ್ಲ ಕಡೆಗಳಲ್ಲೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಆಗ ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, `ಅನಾರೋಗ್ಯದಿಂದ ಸಾವಿಗೀಡಾಗುವ ಪ್ರಕರಣಗಳಲ್ಲಿ ಸರ್ಕಾರದಿಂದ ಪರಿಹಾರ ನೀಡಲು ಅವಕಾಶ ಇಲ್ಲ. ಮುಖ್ಯಮಂತ್ರಿಯವರು ತಮ್ಮ ವಿವೇಚನಾ ಅಧಿಕಾರ ಬಳಸಿ ಸಾಲುಂಡಿಯಲ್ಲಿ ಪರಿಹಾರ ನೀಡಿರಬಹುದು. ಅದನ್ನು ಎಲ್ಲ ಕಡೆಗೂ ವಿಸ್ತರಿಸುವುದು ಅಸಾಧ್ಯ' ಎಂದರು.

ನಂತರ ಬಿಜೆಪಿ ಸದಸ್ಯರು ಸಭಾಪತಿಯವರ ಪೀಠದ ಎದುರು ಧರಣಿ ಆರಂಭಿಸಿದರು. ಸಾಲುಂಡಿಯಲ್ಲಿ ಪರಿಹಾರ ವಿತರಣೆ ನಡೆದಿದೆಯೇ ಎಂಬುದರ ಬಗ್ಗೆಯೂ ಚರ್ಚೆ ನಡೆಯಿತು. ಸದಾನಂದ ಗೌಡ ಅವರು ಮೈಸೂರು ಜಿಲ್ಲಾಧಿಕಾರಿ ಕಚೇರಿಯಿಂದ ನೀಡಿರುವ ಚೆಕ್ಕುಗಳ ಪ್ರತಿಗಳನ್ನು ಪ್ರದರ್ಶಿಸಿದರು. ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದಲೇ ಪರಿಹಾರ ದೊರಕಿಸುವಂತೆ ಆಗ್ರಹಿಸಿದರು.

ಸಭಾನಾಯಕ ಎಸ್.ಆರ್.ಪಾಟೀಲ, ಕಾಂಗ್ರೆಸ್ನ ಹಿರಿಯ ಸದಸ್ಯ ವೀರಣ್ಣ ಮತ್ತಿಕಟ್ಟಿ ಮತ್ತಿತರರು ಧರಣಿ ಕೈಬಿಡುವಂತೆ ಮನವಿ ಮಾಡಿದರು. ಬುಧವಾರ ಮುಖ್ಯಮಂತ್ರಿಯವರು ಸದನಕ್ಕೆ ಬಂದಾಗ ಮತ್ತೆ ವಿಷಯ ಪ್ರಸ್ತಾಪಿಸುವ ಷರತ್ತಿನೊಂದಿಗೆ ಧರಣಿ ಹಿಂದಕ್ಕೆ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.