ಸೋಮವಾರ, ಮೇ 16, 2022
29 °C

ಡೆಂಗೆ ಪ್ರಕರಣ: ಗ್ರಾ.ಪಂ.ಗೆ ಔದ್ರಾಮ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಘಟಪ್ರಭಾ (ಗೋಕಾಕ): ಇಲ್ಲಿಗೆ ಸಮೀಪದ ದುರದುಂಡಿ ಗ್ರಾಮದಲ್ಲಿ ಡೆಂಗೆ ಜ್ವರ ಪ್ರಕರಣಗಳು ಮತ್ತೆ- ಮತ್ತೆ ವರದಿಯಾಗುತ್ತಿರುವ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತಿ ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ವೀಕ್ಷಿಸಲು  ತಹಶೀಲ್ದಾರ ಔದ್ರಾಮ  ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಪಾಟೀಲ ನೇತೃತ್ವದ ಅಧಿಕಾರಿ ಗಳ ತಂಡ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಗ್ರಾ.ಪಂ ಅಧ್ಯಕ್ಷ ಅಶೋಕ ಖಂಡ್ರಟ್ಟಿ ಅವರು ಗ್ರಾಮ ಪಂಚಾಯಿತಿ ವತಿಯಿಂದ ನೈರ್ಮಲ್ಯೀಕರಣಕ್ಕಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ.ಆರೋಗ್ಯ ಇಲಾಖೆ ಅಧಿಕಾರಿಗಳು ಕಳೆದೆರಡು ವಾರಗಳಿಂದ ಗ್ರಾ.ಪಂ. ಕೈಗೊಂಡ ಸುರಕ್ಷತಾ ಕ್ರಮಗಳ ಮೇಲೆ ನಿಗಾ ವಹಿಸಿದೆ ಎಂದು ತಿಳಿಸಿದರು.ಗ್ರಾಮದಾದ್ಯಂತ ವಾರದಲ್ಲಿ ಮೂರು ಬಾರಿ ಫಾಗಿಂಗ್ ಮಾಡಿ ಎಲ್ಲ ಚರಂಡಿಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಲಾಗುತ್ತಿದೆ. ಡಿ.ಡಿ.ಟಿ. ಪೌಡರ್ ಸಿಂಪಡಿಸಿ ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸ್ವಚ್ಛತಾ ಕಾರ್ಯವನ್ನು ನಿರಂತರ ವಾಗಿ ಮುಂದುವರಿಸಿಕೊಂಡು ಹೊಗಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಕಟ್ಟು-ನಿಟ್ಟಿನ ಸೂಚನೆ ಗಳನ್ನು ನೀಡಿದರು.ಈ ಸಂದರ್ಭದಲ್ಲಿ ತಾ.ಪಂ. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಂ.ಗೂಳಪ್ಪನವರ. ಸಹಾಯಕ ಎಂಜಿನಿಯರ್ ರಾಜಕುಮಾರ. ಗ್ರಾಮ ಪಂಚಾಯಿತಿ  ಅಧ್ಯಕ್ಷ ಅಶೋಕ ಖಂಡ್ರಟ್ಟಿ. ಕಾರ್ಯದರ್ಶಿ ವಿ.ಡಿ.ಮಾಳಿ, ಆರೋಗ್ಯ ಸಹಾಯಕಿ ಚಂದ್ರವ್ವ ಪೂಜೇರಿ  ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.