ಶುಕ್ರವಾರ, ಜೂನ್ 25, 2021
27 °C

ಡೆಂಗೆ ಪ್ರಕರಣ ಪತ್ತೆ: ಆತಂಕಗೊಂಡ ಜನರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ತಾಲ್ಲೂಕಿನ ಬಾದರ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪುನರ್ವಸತಿ ಕ್ಯಾಂಪ್‌ನಲ್ಲಿ 18 ಡೆಂಗೆ ಪ್ರಕರಣಗಳು ಪತ್ತೆಯಾಗಿವೆ. 34 ಜನರು ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪುನರ್ವಸತಿ ಕ್ಯಾಂಪ್ ಸಂಖ್ಯೆ 2ರ ವೈದ್ಯಾಧಿಕಾರ ಎಸ್.ಎಸ್.ಸುಂಕದ್ ಹೇಳಿದರು.ಕ್ಯಾಂಪ್‌ನ ಎಲ್ಲ ಕುಟುಂಬಗಳಲ್ಲಿ ಜ್ವರ, ತಲೆನೋವು ಕಾಣಿಸಿ ಕೊಂಡಾಕ್ಷಣ ಬಳ್ಳಾರಿಗೆ ತೆರಳಿ ಚಿಕಿತ್ಸೆ ಪಡೆಯುವುದು ಸಾಮಾನ್ಯವಾಗಿದೆ. ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಮಲೇರಿಯಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ವೀಕ್ಷಣೆ ಮಾಡಿ ಹೋಗಿದ್ದಾರೆ. ಆದರೆ ಡೆಂಗೆ ಜ್ವರ ನಿಯಂತ್ರಣ ಇನ್ನೂ ಸಾಧ್ಯವಾಗಿಲ್ಲ ಎಂದರು.ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತಿತರರು ಪ್ರತಿನಿತ್ಯ ಕ್ಯಾಂಪ್‌ನಲ್ಲಿ ಮನೆ ಮನೆಗೆ ತೆರಳಿ ನೀರಿನ ತೊಟ್ಟಿಗಳು, ಬ್ಯಾರಲ್, ಎರ್‌ಕೂಲರ್‌ಗಳನ್ನು ವಾರಕ್ಕೊಮ್ಮೆ ಖಾಲಿಮಾಡಿ ಸ್ವಚ್ಛಗೊಳಿಸಿ ನೀರು ತುಂಬಬೇಕು. ಪಾತ್ರೆಗಳನ್ನು ಮುಚ್ಚಿಡಬೇಕು. ನೀರನ್ನು ಸರಿಯಾಗಿ ಸೋಸಿ ಬಳಸಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು, ಒಡೆದ ಬಾಟಲಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಮಾಹಿತಿ ನೀಡುವ ಮೂಲಕ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.ಪರೀಕ್ಷಾ ಕೇಂದ್ರ ಇಲ್ಲ : ಡೆಂಗೆ ಜ್ವರವನ್ನು ಪರೀಕ್ಷಿಸುವ ಪ್ರಯೋಗಾ­ಲಯ ಸಿಂಧನೂರಿನಲ್ಲಿ ಇಲ್ಲದೇ ಇರುವುದರಿಂದ ಬಳ್ಳಾರಿಗೆ ಹೋಗಿಯೇ ಚಿಕಿತ್ಸೆ ಪಡೆಯಬೇಕಾಗಿದೆ. ಡೆಂಗೆ ನಿಯಂತ್ರಣ ಮಾಡಲು ಆರೋಗ್ಯ ಇಲಾಖೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.