ಸೋಮವಾರ, ಏಪ್ರಿಲ್ 12, 2021
22 °C

ಡೆಂಗೆ: ಮುಂದುವರಿದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ ಡೆಂಗೆ ಜ್ವರ ಬುಧವಾರ ಮತ್ತೊಂದು ಬಲಿ ತೆಗೆದುಕೊಂಡಿದೆ. ತಾಲ್ಲೂಕಿನ ಬಳ್ಳಗೆರೆಯ ಧನಲಕ್ಷ್ಮೀ (50) ಜ್ವರಕ್ಕೆ ಮೃತರಾದವರು. ಡೆಂಗೆ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಜಿಲ್ಲೆಯಾದ್ಯಂತ ಡೆಂಗೆ ಆರ್ಭಟ ಹೆಚ್ಚುತ್ತಿದ್ದರೂ ಜಿಲ್ಲಾಡಳಿತ, ನಗರ ಸ್ಥಳೀಯ ಸಂಸ್ಥೆ ಕ್ರಮ ಕೈಗೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಡೆಂಗೆ ಜ್ವರದ ಮೂಲ ನೀರು, ಅನೈರ್ಮಲ್ಯವಾಗಿದೆ. ಕುಡಿಯುವ ನೀರಿನ ಕಣ್ಗಾವಲು ಆರೋಗ್ಯ ಇಲಾಖೆ ಮೇಲಿದ್ದರೂ ಅಧಿಕಾರಿಗಳು ಮುತುವರ್ಜಿ ವಹಿಸುತ್ತಿಲ್ಲ. ಕೇವಲ ಡೆಂಗೆ ಕಾಣಿಸಿಕೊಂಡ ಗ್ರಾಮಗಳಿಗೆ ಭೇಟಿ ನೀಡಿ ಕೈತೊಳೆದುಕೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.ನೀರಿನ ಸ್ವಚ್ಛತೆ, ಗ್ರಾಮ ನೈರ್ಮಲ್ಯ ಕಾಪಾಡಲು ನೂರಾರು ಸಿಬ್ಬಂದಿ ಆರೋಗ್ಯ ಇಲಾಖೆಯ ಕೈಕೆಳಗೆ ಕೆಲಸ ನಿರ್ವಹಿಸುತ್ತಿದ್ದರೂ ಯಾವುದೇ ಕೆಲಸ ಮಾಡುತ್ತಿಲ್ಲ. ಬೇಕಾಬಿಟ್ಟಿ ಅಂಕಿಅಂಶಗಳನ್ನು ತೋರಿಸುವ ಕೆಲಸ ಮಾತ್ರ ಆಗುತ್ತಿದೆ. ಕನಿಷ್ಠ ಪಕ್ಷ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂದು ಆರೋಗ್ಯ ಇಲಾಖೆ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.