ಬುಧವಾರ, ಮೇ 12, 2021
17 °C

ಡೆಂಗೆ: ಸೂಕ್ತ ಚಿಕಿತ್ಸೆ ಪಡೆಯಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೊರಬ: ರಾಜ್ಯದಲ್ಲಿ ಡೆಂಗೆ ಜ್ವರ ಹೆಚ್ಚಾಗುತ್ತಿದ್ದು,  ಜ್ವರ ಪೀಡಿತರು ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯದೇ ಹೋದರೆ ಮಾರಕ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಇದೊಂದು ಸಂಕ್ರಾಮಿಕ ರೋಗ ವಾಗಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವ ಮೂಲಕ ಡೆಂಗೆಯಿಂದ ದೂರವಿರಲು ಸಾಧ್ಯವಿದೆ ಎಂದು ತಹಶೀಲ್ದಾರ್ ತೇಜಸ್ ಕುಮಾರ್ ಹೇಳಿದರು.ಇಲ್ಲಿನ ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗೆ ಜ್ವರ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.ಡೆಂಗೆ  ಬಾರದಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸಂಘಟನೆಗಳು ಮಾಡಬೇಕಾಗಿದೆ ಎಂದರು.ಆರೋಗ್ಯ ಇಲಾಖೆಯ ಅಧಿಕಾರಿ ರಮಾಕಾಂತ್ ಮಾತ ನಾಡಿದರು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೀರೇಶ್ ಕುಮಾರ್, ಶಿಕ್ಷಣ ಸಂಯೋಜಕ ಬಿ,ವಿ.ಜಾವೂರ್, ರಮೇಶ್, ಪಟ್ಟಣ ಪಂಚಾಯ್ತಿ ಸದಸ್ಯ ಪ್ರಶಾಂತ್ ಮೇಸ್ತ್ರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.