ಗುರುವಾರ , ಮೇ 13, 2021
39 °C

ಡೆಂಗೆ ಹರಡುವ ಭೀತಿ: ಐವರು ಆಸ್ಪತ್ರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಐಟಿಪಿಎಲ್‌ನಲ್ಲಿ ಇರುವ ಸುಮಧುರ ಸ್ವರ್ಣ ಅಪಾರ್ಟ್‌ಮೆಂಟ್‌ನಲ್ಲಿ ಡೆಂಗೆ ರೋಗಲಕ್ಷಣ ಇರುವವರ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗೆ ಹರಡುವ ಭೀತಿ ಎದುರಾಗಿದೆ.ಅತಿಯಾದ ಜ್ವರ ಹಾಗೂ ತಲೆನೋವಿನಿಂದ ನಿವಾಸಿಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಎರಡು ವಾರಗಳ ಹಿಂದೆಯಷ್ಟೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಈ ವಾರ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಅದರಲ್ಲಿ ಕೆಲವರಿಗೆ ಡೆಂಗೆ ಇರುವುದು ದೃಢಪಟ್ಟಿದೆ ಎಂದು ನಿವಾಸಿ ದೀಪಕ್ ಅಗರವಾಲ್ ತಿಳಿಸಿದರು.ಅಪಾರ್ಟ್‌ಮೆಂಟ್‌ಗಳ ಮಾಲೀಕರು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡದೇ ಇರುವುದರಿಂದ ಅಲ್ಲಲ್ಲಿ ಸೊಳ್ಳೆಗಳು ಹರಡಿ ಡೆಂಗೆ ತರುತ್ತಿವೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.ಈಗಾಗಲೇ ನಿವಾಸಿಗಳು ಬಿಬಿಎಂಪಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. `ಕೆಲವು ದಿನಗಳ ಹಿಂದೆಯಷ್ಟೇ ಈ ಭಾಗದಲ್ಲಿ ಪಾಲಿಕೆ ಅಧಿಕಾರಿಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಲಾರ್ವಾ ಇರುವುದು ಪತ್ತೆಯಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆಯೂ ತಿಳಿ ಹೇಳಲಾಗಿದೆ' ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ಕಲ್ಪನಾ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.