ಶುಕ್ರವಾರ, ಮೇ 14, 2021
27 °C

ಡೊನೇಶನ್ ಪಿಡುಗು ತಡೆಗಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ಸೆಂಟ್‌ಮೇರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ನಡೆಯುತ್ತಿರುವ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿದರು.



ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂದರ್ಭದಲ್ಲಿ ಡೊನೇಶನ್ ಹಾವಳಿಯಿಂದ ಕಾನೂನುಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಸೆಂಟ್‌ಮೇರಿ ಶಾಲೆಯಲ್ಲಿ ಶ್ರೀಮಂತ ಹಾಗೂ ಅಧಿಕಾರಿಗಳ ಮಕ್ಕಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ.



ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬದ ಮಕ್ಕಳಿಗೆ ಈ ಶಾಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ  ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.



ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಡೊನೇಶನ್ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು, ಡೋನೆಶನ್ ಪಡೆಯುತ್ತಿರುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ  ದಿನಗಳಲ್ಲಿ ಹಲವು ಸಂಘಟನೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಯುವಕ ಸಂಘದ ಅಧ್ಯಕ್ಷ ಆರ್.ಅಶೋಕ ಕುಮಾರ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.



ರಾಮಣ್ಣ, ಹುಸೇನ್‌ಬಾಷಾ, ಸೂಗಪ್ಪ, ವಿರೇಶ, ಗೋಪಾಲ,ಚಂದ್ರು, ನಟರಾಜ, ಇಸ್ಮಾಯಿಲ್, ಚಿಂತಾಲ ಮಣಿ, ಸತ್ಯನಾರಾಯಣ, ನಾಗೇಶ, ಆಜಾಮ್,ಮನು, ಶಿವಶಂಕರ, ವೀರೇಶ, ಅನಿಲ್,ಅಕ್ಬರ್ ಅಲಿ, ರಹೀಮ್, ಖಾಜಾ, ಹರ್ಷಾ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.