ಬುಧವಾರ, ಏಪ್ರಿಲ್ 14, 2021
31 °C

ಡೊನೇಷನ್ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಸಂಗ್ರಹಿಸಲಾಗುತ್ತಿರುವ ಅಧಿಕ ಶುಲ್ಕ ವಸೂಲಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ‘ಕರ್ನಾಟಕ ಶ್ರಮಿಕರ ವೇದಿಕೆ’ಯ ಸದಸ್ಯರು ನಗರದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.ಸರ್ಕಾರ ಅಂಥ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.  ಎಲ್ಲಾ ಬಡ ಮತ್ತು ಮಧ್ಯಮವರ್ಗದ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಸೀಟುಗಳನ್ನು ನೀಡುವಂತೆ ನೀತಿ ರೂಪಿಸಬೇಕು ಎಂದರು.ಪ್ರಸ್ತುತ ವಿವಿಧ ಶಾಲೆಗಳಲ್ಲಿ ನೈಜ    ದರಕ್ಕಿಂತ ಹೆಚ್ಚಿನ ಬೆಲೆಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಪೂರೈಸುತ್ತಿದ್ದಾರೆ.ಇದೇ ಪರಿಸ್ಥಿತಿ ಮುಂದುವರೆದರೆ ಬಡವರ ಮಕ್ಕಳು ವಿದ್ಯಾಭ್ಯಾಸ ಮಾಡದೇ ಹೋಟೆಲ್‌ಗಳಲ್ಲಿಯೋ, ಗ್ಯಾರೇಜುಗಳಲ್ಲಿಯೇ ಕೆಲಸ ಮಾಡುವ ಮೂಲಕ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ವಸೂಲಿ ಮಾಡದಂತೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಾಜಣ್ಣ ನಾಗವಾರ, ಪ್ರಧಾನ ಕಾರ್ಯದರ್ಶಿ ತೇಜಸ್ವಿನಿ ಸೇರಿದಂತೆ ಹಲವಾರು ಕಾರ್ಯಕರ್ತರು  ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.