ಶುಕ್ರವಾರ, ಜೂನ್ 18, 2021
22 °C

ಡೊನೇಷನ್ ಹಾವಳಿ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಖಾಸಗಿ ಶಿಕ್ಷಣ ಸಂಸ್ಥೆಗಳು ವಿಪರೀತ ಡೊನೇಷನ್ ವಸೂಲಿ ಮಾಡುವುದನ್ನು ವಿರೋಧಿಸಿ ಜೆಡಿಎಸ್ ಜಿಲ್ಲಾ ಘಟಕ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ  ಸಂಘಟನೆಗಳ ನೇತೃತ್ವದಲ್ಲಿ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯೆದುರು ಸೋಮವಾರ ಪ್ರತಿಭಟನೆ ನಡೆಯಿತು.ಖಾಸಗಿ ಶಾಲೆಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ಶಾಲಾ ದಾಖಲಾತಿ ನಡೆಸುತ್ತಿವೆ. ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಮಧ್ಯಮ ಹಾಗೂ ಕೆಳವರ್ಗದ ಮಕ್ಕಳು ಪ್ರವೇಶ ಪಡೆಯುವುದೇ ಅಸಾಧ್ಯವಾಗಿದೆ. ನಿಗದಿತ ದಿನಾಂಕಕ್ಕೂ ಮುನ್ನ ದಾಖಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುತ್ತಾದೆ ಎಂದು ಪ್ರತಿಭಟನಾಕಾರರು ದೂರಿದರು.ನಗರದ ಹಿಂದುಳಿದ ಪ್ರದೇಶಗಳ ಮಕ್ಕಳನ್ನು ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಭರ್ತಿ ಮಾಡಿಕೊಳ್ಳಬೇಕು. ಮಿತಿಮೀರಿದ ಶುಲ್ಕ ವಸೂಲಿ ನಿಲ್ಲಬೇಕು. ಶುಲ್ಕ ವಸೂಲಾತಿ ನಿಯಮ ಸಂಬಂಧಿಸಿ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ನೀಡಬೇಕು. ಡಿಡಿಪಿಐ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಬೇಕು. ಶೀಘ್ರವೇ ಎಲ್ಲ ಶಾಲೆಗಳ ಮುಖ್ಯಸ್ಥರ ಸಭೆ ಕರೆಯಬೇಕು. ನಿಯಮ ಮೀರಿ ಶುಲ್ಕ ವಸೂಲು ಮಾಡುತ್ತಿರುವ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಕಠಿಣ ನಿಲುವು ತಳೆಯಬೇಕು ಎಂದು ಆಗ್ರಹಿಸಿದರು.ಪ್ರಭಾರ ಡಿಡಿಪಿಐ ಪ್ರಸನ್ನಕುಮಾರ್ ಮನವಿ ಸ್ವೀಕರಿಸಿ, ಮಾರ್ಚ್ 30ರ ಒಳಗೆ ಎಲ್ಲ ಖಾಸಗಿ ಶಾಲಾ ಮುಖ್ಯಸ್ಥರ ಸಭೆ ಕರೆದು ಸರ್ಕಾರದ  ಸುತ್ತೋಲೆ ಬಗ್ಗೆ ಮತ್ತೊಮ್ಮೆ ಮನವರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಟಿ. ದಾಸಕರಿಯಪ್ಪ, ಕಾರ್ಯಾಧ್ಯಕ್ಷ ಬಿ.ಎಂ. ಸತೀಶ್, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಆಲೂರು ನಿಂಗರಾಜು, ಬಾತಿ ಶಂಕರ್, ಅಸ್ಗರ್,  ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ರಾಮೇಗೌಡ ಇತರರು ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.