ಮಂಗಳವಾರ, ಮೇ 11, 2021
27 °C

ಡ್ರಾದ ಹಾದಿ ಹಿಡಿದ ಪಂದ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೋರ್ಟ್ ಆಫ್ ಸ್ಪೇನ್ (ಪಿಟಿಐ): ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯ ಡ್ರಾದ ಹಾದಿ ಹಿಡಿದಿದೆ. ನಾಲ್ಕನೇ ದಿನದಾಟಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಕೇವಲ 30.4 ಓವರ್‌ಗಳ ಆಟ ನಡೆಯಿತು.

 

ಕ್ವೀನ್ಸ್ ಪಾರ್ಕ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬುಧವಾರದ ಆಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತನ್ನ ಎರಡನೇ ಇನಿಂಗ್ಸ್‌ನಲ್ಲಿ 30 ಓವರ್‌ಗಳಲ್ಲಿ 3 ವಿಕೆಟ್‌ಗೆ 73 ರನ್ ಗಳಿಸಿದೆ. ಇದೀಗ ಮೈಕಲ್ ಕ್ಲಾರ್ಕ್ ಬಳಗ ಒಟ್ಟು 127 ರನ್‌ಗಳ ಮುನ್ನಡೆಯಲ್ಲಿದೆ.ಸಂಕ್ಷಿಪ್ತ ಸ್ಕೋರ್: ಆಸ್ಟ್ರೇಲಿಯಾ: ಮೊದಲ ಇನಿಂಗ್ಸ್ 135 ಓವರುಗಳಲ್ಲಿ 311 ಮತ್ತು ಎರಡನೇ ಇನಿಂಗ್ಸ್ 30 ಓವರ್‌ಗಳಲ್ಲಿ 3 ವಿಕೆಟ್‌ಗೆ 73 (ಎಡ್ ಕೋವನ್ 20, ರಿಕಿ ಪಾಂಟಿಂಗ್ ಬ್ಯಾಟಿಂಗ್ 32, ಮೈಕಲ್ ಕ್ಲಾರ್ಕ್ ಬ್ಯಾಟಿಂಗ್ 03, ಕೆಮರ್ ರೋಷ್ 27ಕ್ಕೆ 3). ವೆಸ್ಟ್ ಇಂಡೀಸ್: ಮೊದಲ ಇನಿಂಗ್ಸ್ 104.4 ಓವರ್‌ಗಳಲ್ಲಿ  257.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.