ಬೆಂಗಳೂರು: ಬೇಸಿಗೆಯ ತಾಪಕ್ಕೆ ಬಸವಳಿದಿದ್ದ ನಗರದ ಜನತೆ ಬುಧವಾರ ಸುರಿದ ಮಳೆಯಿಂದ ತಂಪಾದರು.

ಏಪ್ರಿಲ್ ಆರಂಭದಿಂದ ರಾಜ್ಯದ ವಿವಿಧೆಡೆಗಳಲ್ಲಿ ಮಳೆಯಾಗುತ್ತಿದ್ದರೂ ನಗರದಲ್ಲಿ ಮಾತ್ರ ಈವರೆಗೂ ಮಳೆಯಾಗಿರಲಿಲ್ಲ. ಮಧ್ಯಾಹ್ನದಿಂದ ಆರಂಭವಾದ ಮಳೆ ರಾತ್ರಿಯಾದರೂ ಜಿಟಿ ಜಿಟಿಯಾಗಿ ಸುರಿಯುತ್ತಲೇ ಇತ್ತು.

ಮಳೆಯಿಂದಾಗಿ ಮೆಜೆಸ್ಟಿಕ್, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಮೆಜೆಸ್ಟಿಕ್ನಲ್ಲಿ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಧೂಳಿನಿಂದ ಕೂಡಿದ್ದ ನಗರದ ರಸ್ತೆಗಳು ಮಳೆಯಿಂದಾಗಿ ಮೈತೊಳೆದುಕೊಂಡವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.