ಭಾನುವಾರ, ಜೂನ್ 20, 2021
29 °C
ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಬುಧವಾರದಿಂದಲೇ ಜಾರಿಯಾಗಿದೆ. ಏ.17 ರಂದು ನಡೆಯಲಿರುವ ಹಾವೇರಿ ಲೋಕಸಭೆ ಚುನಾವಣೆಗೆ ಮಾ.19 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಮಂಜು ನಾಥ ನಾಯ್ಕ ತಿಳಿಸಿದರು.ಬುಧವಾರ ಪತ್ರಿಕಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಮತದಾರರ ಸೇರ್ಪಡೆ ಕಾರ್ಯ ಮುಂದುವರೆದಿದ್ದು, ಮಾ.16 ಕೊನೆಯ ದಿನ. ಅಷ್ಟರೊಳಗೆ 18 ವರ್ಷ ಮೀರಿದ ಪ್ರತಿಯೊಬ್ಬರು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾವಣಿ ಮಾಡಿಕೊಳ್ಳಬಹುದು ಎಂದರು.ಮಾ.9ರಂದು ಪ್ರತಿಯೊಂದು ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪ್ರಚುರಪಡಿಸಲಾಗುವುದು. ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ, ವಯಸ್ಸು ಹಾಗೂ ಭಾವಚಿತ್ರ ಸರಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಏನಾದರೂ ಸಮಸ್ಯೆ ಇದ್ದರೆ, ಅಲ್ಲಿಯೇ ಇರುವ ಅಧಿಕಾರಿಗಳಿಗೆ ಬದಲಾವಣೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ  ಎಂದರು.ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ ಮಾಡಲು ಗ್ರಾ.ಪಂ.ನಿಂದ  ಜಿಲ್ಲಾ ಮಟ್ಟದ ವರೆಗೆ ತಂಡಗಳನ್ನು ರಚಿಸಲಾಗಿದೆ. ಜಿಲ್ಲಾ ಮಟ್ಟದ ತಂಡದ ನೇತೃತ್ವವನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ವಹಿಸಲಿದ್ದಾರೆ. ಗ್ರಾಮ ಮಟ್ಟದಲ್ಲಿ ಪಿಡಿಓ, ಗ್ರಾಮ ಲೆಕ್ಕಿಗರು ಹಾಗೂ ಹೋಬಳಿ ಮಟ್ಟದಲ್ಲಿ ಕಂದಾಯ ನಿರೀಕ್ಷಕರು ಆ ಜವಾಬ್ದಾರಿ ನಿಬಾಯಿಸಲಿದ್ದಾರೆ ಎಂದು ತಿಳಿಸಿದರು.ಮತದಾನಕ್ಕೆ ಜಿಲ್ಲೆಯಲ್ಲಿ ಪ್ರತಿ ಮತಗಟ್ಟೆಗೆ ನಾಲ್ಕು ಸಿಬ್ಬಂದಿಯಂತೆ 1406 ಮತಗಟ್ಟೆಗಳಿಗೆ 5624 ಸಿಬ್ಬಂದಿಯನ್ನು ಮತ್ಉ ಹೆಚ್ಚುವರಿ ಯಾಗಿ ಶೇ 10 ರಷ್ಟು ಸಿಬ್ಬಂದಿಯನ್ನು ಕಾಯ್ದರಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಜ.31 ರವರೆಗೆ ಒಟ್ಟು 11,16,801 ಮತದಾರರ ನೋಂದಣಿಯಾಗಿದೆ. ಅವರಲ್ಲಿ 11,14211 ಮತದಾರರಿಗೆ ಭಾವಚಿತ್ರ ಇರುವ ಗುರುತಿನ ಚೀಟಿ ನೀಡಲಾಗಿದೆ. ಶೇ 99.86 ರಷ್ಟು ಸಾಧನೆ ಮಾಡಲಾಗಿದೆ ಎಂದರು.ಚುನಾವಣೆ ಸಂಬಂಧಿಸಿದಂತೆ ಯಾವುದೇ ದೂರು ಅಥವಾ ಚುನಾವಣೆ ಮಾಹಿತಿ ಪಡೆಯಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸಲಾಗಿದೆ. ಸಾರ್ವಜನಿಕರು ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ 08375–249122 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಚುನಾವಣೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು ಜಿ.ಪಂ.ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾ ಗುತ್ತದೆ. ಮೂರ್ನಾಲ್ಕು ಹಂತದಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.