ಬುಧವಾರ, ಅಕ್ಟೋಬರ್ 23, 2019
24 °C

ತಜ್ಞರ ನೇಮಕಕ್ಕೆ ಸಿದ್ಧ: ಸಿ.ಎಂ

Published:
Updated:

ಬೆಂಗಳೂರು: `ನಂದಿಕೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಿಂದ ಸ್ಥಳೀಯ ಪರಿಸರದ ಮೇಲೆ ಆಗುತ್ತಿರುವ ಹಾನಿ ಕುರಿತು ಅಧ್ಯಯನ ನಡೆಸಲು ನೇಮಕಗೊಂಡಿದ್ದ ಸಮಿತಿಯ ಎರಡು ಸ್ಥಾನಗಳಿಗೆ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸೂಚಿಸುವ ವ್ಯಕ್ತಿಗಳನ್ನು ನೇಮಕ ಮಾಡಲು ಸಿದ್ಧ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.ಗೃಹ ಕಚೇರಿ `ಕೃಷ್ಣಾ~ದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಸಮಿತಿಯ ಇಬ್ಬರು ಸದಸ್ಯರು ತಮ್ಮ ಕಾರ್ಯವ್ಯಾಪ್ತಿ ಮೀರಿ ವರ್ತಿಸಿದ ಕಾರಣ ಅವರನ್ನು ಸಮಿತಿಯಿಂದ ಕೈಬಿಡಲಾಯಿತು~ ಎಂದು ತಿಳಿಸಿದರು.`ಸಮಿತಿಯ ಸದಸ್ಯರಾಗಿದ್ದ ವೈ.ಬಿ. ರಾಮಕೃಷ್ಣ ಮತ್ತು ಟಿ.ವಿ. ರಾಮಚಂದ್ರ ಅವರು ವರದಿಯ ಅಂಶಗಳನ್ನು ಸರ್ಕಾರಕ್ಕೆ ಸಲ್ಲಿಸುವ ಮೊದಲೇ ಮಾಧ್ಯಮಗಳಿಗೆ ತಿಳಿಸುತ್ತಿದ್ದರು. ಇವರನ್ನು ಹೊರತುಪಡಿಸಿ ಬೇರೆ ತಜ್ಞರನ್ನು ಸ್ವಾಮೀಜಿ ಸೂಚಿಸಿದರೆ ಅವರನ್ನೇ ನೇಮಕ ಮಾಡಲಾಗುವುದು~ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)