ತಡವಾದ ಆಹ್ವಾನ ಪತ್ರಿಕೆ

7

ತಡವಾದ ಆಹ್ವಾನ ಪತ್ರಿಕೆ

Published:
Updated:

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಶನಿವಾರ (ಅ.20)ದಿಂದ 3 ದಿನಗಳ ಕಾಲ ನಡೆಯುವ ದಸರಾ ಉತ್ಸವದ ಆಹ್ವಾನ ಪತ್ರಿಕೆ ಕಾರ್ಯಕ್ರಮಕ್ಕೆ ಎರಡು ದಿನಗಳು ಬಾಕಿ ಇರುವಾಗ ಅಧಿಕಾರಿಗಳ ಕೈ ಸೇರಿದೆ.ಗುರುವಾರ ಸಂಜೆ ಆಹ್ವಾನ ಪತ್ರಿಕೆ ಹಂಚುವ ಕೆಲಸ ಶುರುವಾಯಿತು. ಇನ್ನು ಕಲಾವಿದರು, ಗ್ರಾಮ ಪಂಚಾಯಿತಿಗಳು, ಸರ್ಕಾರಿ ಕಚೇರಿಗಳು, ವಿವಿಧ ಸಂಘ-ಸಂಸ್ಥೆಗಳಿಗೆ ಆಹ್ವಾನ ಪತ್ರಿಕೆ ಹೇಗೆ ತಲುಪಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದವು. ದಸರಾ ಆಚರಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಇದುವರೆಗೆ 6 ಸಭೆಗಳು ನಡೆದಿವೆ. ಸೆ.21ರಂದು ಮೊದಲ ಸಭೆ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ನಂತರ ಅ.8, 10, 16, 17 ಹಾಗೂ 18ರಂದು ಪೂರ್ವ ಸಿದ್ಧತಾ ಸಭೆಗಳು ನಡೆದಿವೆ. ಇಷ್ಟಾದರೂ ಸಕಾಲಕ್ಕೆ ಆಹ್ವಾನ ಪತ್ರಿಕೆ ಮುದ್ರಿಸಿ ಹಂಚದೇ ಇರುವುದು ಚರ್ಚೆಗೆ ಗ್ರಾಸವಾಗಿದೆ.ಎರಡು ಪತ್ರಿಕೆ: ಪಟ್ಟಣದಲ್ಲಿ ನಡೆಯುವ ದಸರಾ ಉತ್ಸವಕ್ಕೆ ಎರಡು ಆಹ್ವಾನ ಪತ್ರಿಕೆ ಮುದ್ರಿಸಲಾಗಿದೆ. ಒಂದು ಪತ್ರಿಕೆಯಲ್ಲಿ ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಅವರ ಹೆಸರು ಇಲ್ಲ ಎಂಬ ಕಾರಣಕ್ಕೆ ಮತ್ತೊಂದು ಪತ್ರಿಕೆ ಮುದ್ರಿಸಿ ಹಂಚಲಾಗಿದೆ.`ಸಚಿವರಾದ ಬಿ.ಜೆ.ಪುಟ್ಟಸ್ವಾಮಿ ಅವರು ಕಡೇ ಗಳಿಗೆಯಲ್ಲಿ ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದರು. ಹಾಗಾಗಿ ಆಹ್ವಾನ ಪತ್ರಿಕೆ ಬದಲಿಸುವುದು ಅನಿವಾರ್ಯವಾಯಿತು~ ಎಂದು ತಹಶೀಲ್ದಾರ್ ಅರುಳ್‌ಕುಮಾರ್ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry