ಸೋಮವಾರ, ಜೂನ್ 14, 2021
28 °C

ತಡೆಗೋಡೆ: ಗ್ರಾಮಸ್ಥರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ: ಕೆರೆ ಏರಿ ಮೇಲೆ ಹಾದು ಹೋಗುವ ರಸ್ತೆಗೆ ತಡೆಗೋಡೆ ನಿರ್ಮಿಸುವ ಮೂಲಕ ಅಪಘಾತ ತಪ್ಪಿಸಬೇಕು ಎಂದು ಒತ್ತಾಯಿಸಿ ದೊಡ್ಡಮಾಲೂರು ಹಾಗೂ ನೆರೆಹೊರೆ ಗ್ರಾಮಸ್ಥರು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.ಕೊಡಿಗೇನಹಳ್ಳಿಯಿಂದ ಮಧುಗಿರಿ ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ಕೆರೆ ಏರಿ ಮೇಲಿನ ರಸ್ತೆಯಿಂದ ಕೆಳಗೆ ಉರುಳಿ ಇಬ್ಬರಿಗೆ ತೀವ್ರ ಗಾಯಗಳಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಎಂಟು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಖಾಸಗಿ ಬಸ್ ಕೆರೆಗೆ ಉರುಳಿ ಸ್ಥಳದಲ್ಲೇ ನಾಲ್ವರು ಮೃತಪಟ್ಟು 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದವು.ಅಂದು ಸ್ಥಳಕ್ಕೆ ಭೇಟಿ ನೀಡಿದ ಡಿಸಿ ಆರು ತಿಂಗಳ ಒಳಗಾಗಿ ರಸ್ತೆ ದುರಸ್ತಿ ಮಾಡಿಸಿ, ತಡೆಗೋಡೆ ನಿರ್ಮಿಸುವುದಾಗಿ ಹೇಳಿದ್ದರು. ಆದರೆ ಇದುವರೆವಿಗೂ ಕಾಮಗಾರಿ ಆರಂಭವಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಆರ್.ನಾಗರಾಜಶೆಟ್ಟಿ 2 ತಿಂಗಳೊಳಗಾಗಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ ನಂತರ ಮುಷ್ಕರ ಕೈಬಿಡಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.