ತನಿಖೆಗೆ ಆದೇಶ

7

ತನಿಖೆಗೆ ಆದೇಶ

Published:
Updated:

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ. ಅಯ್ಯಪ್ಪ ಮತ್ತು ನಗರ ಜಿಲ್ಲಾ ಲೋಕಾಯುಕ್ತ ಎಸ್‌ಪಿ ಪಿ.ಕೆ. ಶಿವಶಂಕರ್ ಅವರ ವಿರುದ್ಧ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಸೋಮವಾರ ಆದೇಶಿಸಿದರು.ಅಯ್ಯಪ್ಪ ಮತ್ತು ಶಿವಶಂಕರ್ ವಿರುದ್ಧ ಆರ್. ಶ್ರೀನಿವಾಸಮೂರ್ತಿ ಎಂಬುವವರು ದೂರು ದಾಖಲಿಸಿದ್ದರು.

ತನಿಖೆ ನಡೆಸಿ ನವೆಂಬರ್ 7ರಂದು ವರದಿ ಸಲ್ಲಿಸುವಂತೆ ನ್ಯಾಯಾಧೀಶ ಸುಧೀಂದ್ರ ರಾವ್ ಅವರು ಆದೇಶಿಸಿದರು. ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಎಡಿಜಿಪಿ ಎಚ್.ಎನ್. ಸತ್ಯನಾರಾಯಣ ಅವರಿಗೆ ವಹಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry