ತನಿಖೆಗೆ 3 ತಂಡ ರಚನೆ: ಅಶೋಕ

7

ತನಿಖೆಗೆ 3 ತಂಡ ರಚನೆ: ಅಶೋಕ

Published:
Updated:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗಾಂಧಿನಗರ ವಾರ್ಡ್ ಸದಸ್ಯ ನಟರಾಜ್ ಅವರ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮೂರು ತಂಡಗಳನ್ನು ರಚಿಸಿದ್ದು, ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಆರ್.ಅಶೋಕ ಶನಿವಾರ ತಿಳಿಸಿದರು.ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಪಾಲಿಕೆ ಸದಸ್ಯನ ಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಗರ ಪೊಲೀಸ್ ಕಮಿಷನರ್ ಈಗಾಗಲೇ ಮೂರು ತಂಡಗಳನ್ನು ರಚಿಸಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆಹಚ್ಚಿ, ಬಂಧಿಸುವಂತೆ ಆದೇಶಿಸಿದ್ದೇನೆ~ ಎಂದರು.ನಗರ ಪೊಲೀಸ್ ಕಮಿಷನರ್ ಕೆ.ಜ್ಯೋತಿಪ್ರಕಾಶ್ ಮಿರ್ಜಿ, ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರೂಪಕ್‌ಕುಮಾರ್ ದತ್ತ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry