ತನಿಖೆ ನಡೆಸಿ ಕ್ರಮ: ಐಜಿ ಅಮರಕುಮಾರ್‌ಪಾಂಡೆ

7

ತನಿಖೆ ನಡೆಸಿ ಕ್ರಮ: ಐಜಿ ಅಮರಕುಮಾರ್‌ಪಾಂಡೆ

Published:
Updated:

ಕೋಲಾರ: ಕಾರ್ಮಿಕರೊಬ್ಬರ ಮೇಲೆ ಡಿವೈಎಸ್‌ಪಿ ಶ್ರೀಹರಿ ಬರಗೂರು ಅಮಾನುಷ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಕುರಿತು ಹಿರಿಯ ಅಧಿಕಾರಿಯೊಬ್ಬರಿಂದ ತನಿಖೆ ನಡೆಸಲಾಗುವುದು. ವರದಿ ಬಂದ ಬಳಿಕ ನಿಷ್ಪಕ್ಷಪಾತವಾಗಿ, ಯಾವ ಒತ್ತಡಗಳಿಗೂ ಮಣಿಯದೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಲಯ ಐಜಿಪಿ ಅಮರಕುಮಾರ್ ಪಾಂಡೆ ತಿಳಿಸಿದರು.ಹಲ್ಲೆಗೊಳಗಾದ ಸಾದಿಕ್‌ಪಾಷಾ ಅವರನ್ನು  ಭೇಟಿ ಮಾಡಿ ಮಾಹಿತಿ ಪಡೆದ ಅವರು, ಸಂತ್ರಸ್ತ ವ್ಯಕ್ತಿಯು ನ್ಯಾಯಾಂಗ ಬಂಧನದಲ್ಲಿರುವುದರಿಂದ ಆತನ ಹೇಳಿಕೆಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.ಅಧಿಕಾರಿಯ ಮೇಲೆ ಹಲ್ಲೆ ನಡೆದಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಪ್ರಕರಣದ ವಸ್ತುಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.ಪ್ರತಿಭಟನೆ ನಡೆಸಿರುವ ರಾಜಕೀಯ ಪಕ್ಷಗಳ ಮುಖಂಡರು ಆರೋಪಿಸಿರುವ ಅಂಶಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry