ಕನಕಪುರ: ತಾಲ್ಲೂಕಿನ ಹಾರೋಹಳ್ಳಿ ಹೋಬಳಿ ಅಣೇದೊಡ್ಡಿ ಗ್ರಾಮದಲ್ಲಿ ಡೆಂಗೆ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ನಡೆಸಿತು.

ಅಣೇದೊಡ್ಡಿ ಗ್ರಾಮದಲ್ಲಿ ಸಾಮೂಹಿಕ ಜ್ವರ ಕಾಣಿಸಿಕೊಂಡರೂ ಆರೋಗ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು `ಪ್ರಜಾವಾಣಿ' ಪತ್ರಿಕೆ ಮಾಡಿದ ವರದಿಯಿಂದ ಎಚ್ಚೆತ್ತುಕೊಂಡ ತಾಲ್ಲೂಕು ಆರೋಗ್ಯ ಇಲಾಖೆಯು ಸೋಮವಾರ ತಾಲ್ಲೂಕು ಆಡಳಿತಾಧಿಕಾರಿ ಡಾ. ಶಿವಕುಮಾರ್ ಎಂ. ಅವರ ನೇತೃತ್ವದಲ್ಲಿ ಬೆಳಿಗ್ಗೆಯೇ ಅಣೇದೊಡ್ಡಿ ಗ್ರಾಮದಲ್ಲಿ ಆರೋಗ್ಯ ಶಿಬಿರ ನಡೆಸಿತು.

ದೊಂಬರದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ಕಾವ್ಯ ತಿಮ್ಮಯ್ಯ ಮತ್ತು ಹಾರೋಹಳ್ಳಿ ಸಮುದಾಯ ಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಲಕ್ಷ್ಮೀಪತಿ ಆರ್.ಎನ್ ಹಾಗೂ ಲ್ಯಾಬ್ ಟೆಕ್ನೀಷಿಯನ್ಗಳು ಶಿಬಿರದಲ್ಲಿ ಹಾಜರಿದ್ದು ಜ್ವರಪೀಡಿತ ರೋಗಿಗಳ ರಕ್ತದ ಮಾದರಿಯನ್ನು ಸಂಗ್ರಹಿಸಿದರು.

ಅಣೇದೊಡ್ಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಶಿಬಿರಕ್ಕೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಇದೇ ಸಂದರ್ಭದಲ್ಲಿ ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಅಧ್ಯಕ್ಷ ಉಪಾಧ್ಯಕ್ಷರು ಗ್ರಾಮದಲ್ಲಿ ಸಂಚರಿಸಿ ರಸ್ತೆ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕಿ ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

ಸದ್ಯ ಗ್ರಾಮದಲ್ಲಿ ಆರೋಗ್ಯ ಇಲಾಖೆ ಮತ್ತು ಪಂಚಾಯಿತಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಮಂಗಳವಾರವೂ ಶಿಬಿರ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.