ಮಂಗಳವಾರ, ಏಪ್ರಿಲ್ 20, 2021
31 °C

ತಪ್ಪಿನ ಅರಿವಾಗಿದೆ: ಶಾಸಕ ಸುರೇಶಗೌಡ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಡಗಿ: ವೈಯಕ್ತಿಕ ಕಾರಣಗಳಿಂದ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದಿಢೀರ್ ಶಾಸಕ ಸ್ಥಾನಕ್ಕೆ ರಾಜೇನಾಮೆ ನೀಡಿದ್ದು, ನನ್ನ ತಪ್ಪಿನ ಅರಿವಾಗಿ ಈಗ ರಾಜೀನಾಮೆಯನ್ನು ವಾಪಸ್ ಪಡೆದಿರುವುದಾಗಿ ಶಾಸಕ ಸುರೇಶಗೌಡ ಪಾಟೀಲ ಹೇಳಿದರು.  ಭಾನುವಾರ ಎಪಿಎಂಸಿ ಪ್ರಾಂಗಣದ ದಲಾಲಿ ಅಂಗಡಿಯಲ್ಲಿ ಏರ್ಪಡಿಸಿದ್ದ ತಾಲ್ಲೂಕಿನ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡರು. ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ಸರಕಾರ ಇರುವವರೆಗೆ ಶಾಸಕನಾಗಿ ಮುಂದುವರೆಯುವ ಮೂಲಕ ತಾಲ್ಲೂಕಿನ ಜನತೆಯ ಸೇವೆಯನ್ನು ಮಾಡುವುದಾಗಿ ಭರವಸೆ ನೀಡಿದರು.  ಕ್ಷೇತ್ರದ ಮತದಾರರಿಗೆ ಯಾವತ್ತೂ ಅನ್ಯಾಯ ಮಾಡುವುದಿಲ್ಲ ವೆಂದು ಸ್ಪಷ್ಟಪಡಿಸಿದ ಅವರು ಕ್ಷೇತ್ರದ ಅಭಿ ವೃದ್ದಿಗೆ ಶ್ರಮಿಸುವುದಾಗಿ ಹೇಳಿದರು. ಮುಂದಿನ ವಿಧಾನಸಭಾ ಚುನಾವಣೆ ಎದುರಾದಾಗ ಯಾವ ಪಕ್ಷಕ್ಕೆ ಸೇರಬೇಕು ಎನ್ನುವುದನ್ನು ತದನಂತರ ನಿರ್ಧರಿಸಲಾಗುವುದೆಂದು ತಿಳಿಸಿದರು.ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ ಮಾತನಾಡಿ, ಶಾಸಕ ಸುರೇಶಗೌಡ ಪಾಟೀಲರ ರಾಜೀನಾಮೆಯ ಕುರಿತು ಪತ್ರಿಕೆಗಳಲ್ಲಿ ಗೊಂದಲಮಯ ಹೇಳಿಕೆಗಳು ಬಂದಿದ್ದು, ಅವು ಸತ್ಯಕ್ಕೆ ದೂರವಾಗಿವೆ. ಈ ಹಿಂದೆ 16 ಸದಸ್ಯ ಬಲದ ಕೆರವಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಹಿಡಿತದಲ್ಲಿತ್ತು.ಶಾಸಕರ ಪ್ರಯತ್ನದಿಂದ ಕಳೆದ ಗ್ರಾ.ಪಂ ಚುನಾ ವಣೆಯಲ್ಲಿ 12 ಸದಸ್ಯರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಆದರೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅವರು ಸೂಚಿಸಿದ ಅಭ್ಯರ್ಥಿಯು ಆಯ್ಕೆಯಾಗಲಿಲ್ಲವೆಂದು ಮನಸ್ಸಿಗೆ ನೋವು ಮಾಡಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ಇವೆಲ್ಲ ಸಹಜ ವಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರಾದ ಸಿ.ಎಂ.ಉದಾಸಿ, ಬಸವರಾಜ ಬೊಮ್ಮಾಯಿ ಹಾಗೂ ಕೆ.ಎಸ್. ಈಶ್ವರಪ್ಪ ಮಾತಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಮನ್ನಣೆ ನೀಡಿ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆಂದು ಸಜ್ಜನರ    ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸುರೇಶ ಯತ್ನಳ್ಳಿ, ವಿ.ವಿ. ಹಿರೇಮಠ, ಮಲ್ಲಪ್ಪ ಗುಡುಗೂರ, ಬಸಣ್ಣ ಬಣಕಾರ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ, ಸದಸ್ಯ ನಾಗರಾಜ ಬಳ್ಳಾರಿ, ಎಪಿಎಂಸಿ ಅಧ್ಯಕ್ಷ ಮಲ್ಲಯ್ಯ ಹಿರೇಮಠ ಹಾಗೂ ಇನ್ನಿತರ ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.