ಭಾನುವಾರ, ಏಪ್ರಿಲ್ 18, 2021
32 °C

ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನೆ

ರಾಮನಗರ: ನವೆಂಬರ್ 30ರವರೆಗೆ ಕಾವೇರಿ ನದಿಯಿಂದ ತಮಿಳುನಾಡಿಗೆ 4.8 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಉಸ್ತುವಾರಿ ಸಮಿತಿಯು ಕರ್ನಾಟಕಕ್ಕೆ ಆದೇಶಿಸಿರುವುದನ್ನು ಖಂಡಿಸಿ ಕಸ್ತೂರಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಐಜೂರು ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಬೆಂಗಳೂರು- ಮೈಸೂರು ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.`ತಮಿಳುನಾಡಿಗೆ ಈಗ ನೀರಿನ ಅವಶ್ಯಕತೆಯಿಲ್ಲ. ಆದರೂ ನೀರು ಬಿಡಲು ಕಾವೇರಿ ಉಸ್ತುವಾರಿ ಸಮಿತಿ ಆದೇಶ ನೀಡಿದೆ. ಇದು ಅತ್ಯಂತ ಅವೈಜ್ಞಾನಿಕವಾಗಿದೆ. ಜಯಲಲಿತಾ ಕನ್ನಡ ನಾಡಿನ ಮಗಳಾಗಿದ್ದರೂ, ನಾಡಿನ ವಿರುದ್ಧನಡೆದುಕೊಳ್ಳುತ್ತಿದ್ದಾರೆ. ಜಯಲಲಿತಾ ರಾಜ್ಯಕ್ಕೆ ಬಂದರೆ ಅವರ ಮುಖಕ್ಕೆ ಮಸಿ ಬಳಿಯಲಾಗುವುದು~ ಎಂದು ಎಚ್ಚರಿಸಿದರು.`ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರ ಕೂಡ ರೈತರ ಪರವಾಗಿಲ್ಲ. ರಾಜಕಾರಣಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ಕಾವೇರಿ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ಪರಿಹರಿಸುತ್ತಿಲ್ಲ. ಇಂದು ಸಾಂಕೇತಿಕ ಪ್ರತಿಭಟನೆಯನ್ನು ಮಾಡಲಾಗಿದ್ದು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರನ್ನು ಬಿಟ್ಟರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು~ ಎಂದು ಕಸ್ತೂರಿ ಕನ್ನಡ ಜನಪರ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬೇವೂರು ಯೋಗೇಶ್ ಹೇಳಿದರು.ಮಹಿಳಾ ಘಟಕದ ಕೋಶಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡರಾದ ರಂಜಿತ್‌ಗೌಡ, ಮಂಗಳಮ್ಮ, ವಿನಯ್, ಶಶಿಧರ್, ದಿಲೀಪ್ ಇತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.