ಮಂಗಳವಾರ, ಮಾರ್ಚ್ 2, 2021
31 °C

ತಮಿಳುನಾಡು ರಾಜ್ಯಪಾಲರಾಗಿ ಶಂಕರಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಮಿಳುನಾಡು ರಾಜ್ಯಪಾಲರಾಗಿ ಶಂಕರಮೂರ್ತಿ

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರು ತಮಿಳುನಾಡು ರಾಜ್ಯಪಾಲರಾಗಿ ನೇಮಕವಾಗುವುದು ಬಹುತೇಕ ಖಚಿತವಾಗಿದೆ.ಜನ ಸಂಘದ ಕಾಲದಿಂದಲೂ ಪಕ್ಷ ಸಂಘಟನೆಗಾಗಿ ಶ್ರಮಿಸಿರುವ 76 ವರ್ಷದ ಶಂಕರಮೂರ್ತಿ ಅವರನ್ನು ದಕ್ಷಿಣ ಭಾರತದ ಯಾವುದಾರೂ ರಾಜ್ಯಕ್ಕೆ ರಾಜ್ಯಪಾಲರಾಗಿ ನೇಮಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠರು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರ ಮೇಲೆ ಒತ್ತಡ ಹಾಕಿದ್ದರು.ಹಾಗಾಗಿ, ಒಂದು ವಾರದ ಹಿಂದೆಯೇ ಅಮಿತ್‌ ಷಾ ಅವರು ಶಂಕರಮೂರ್ತಿ ಅವರನ್ನು ಕರೆದು ಹೊಸ ಜವಾಬ್ದಾರಿ ನಿಭಾಯಿಸಲು ಸಿದ್ಧರಾಗಿರುವಂತೆ ಸೂಚಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.