ತಮ್ಮಣ್ಣ ವಿರುದ್ಧ ತನಿಖೆಗೆ ಆದೇಶ

7

ತಮ್ಮಣ್ಣ ವಿರುದ್ಧ ತನಿಖೆಗೆ ಆದೇಶ

Published:
Updated:

ಬೆಂಗಳೂರು:  ಮಂಡ್ಯ ಜಿಲ್ಲೆ ಕಿರುಗಾವಲು ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಅವಧಿಯಲ್ಲಿ 1,000 ಕೋಟಿ ರೂಪಾಯಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪಗಳ ಬಗ್ಗೆ ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯ ಪ್ರಕರಣಗಳ ಬೆಂಗಳೂರು ಗ್ರಾಮಾಂತರ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿದೆ.ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ, ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿದೆ. ಕೋರ್ಟ್‌ಆದೇಶದ ಪ್ರಕಾರವೇ ಶೀಘ್ರದಲ್ಲಿ ತಮ್ಮಣ್ಣ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry